ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನೈತಿಕ ಸಂಬಂಧದ ಅನುಮಾನ: ಪ್ರೀತಿಸಿ ಮದುವೆಯಾದವನು ರಸ್ತೆಯಲ್ಲೇ ಪತ್ನಿಗೆ ಇರಿದು, ಕತ್ತು ಕೊಯ್ದುಕೊಂಡ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೈಗಾರಿಕಾ ಪ್ರದೇಶದ ಬಳಿ ವತಿಯಿಂದ ಇರಿತಕ್ಕೆ ಒಳಗಾಗಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅರ್ಪಿತಾ ಮೃತಪಟ್ಟ ಮಹಿಳೆ. ಹೊಸಕೋಟೆ ನಿವಾಸಿಯಾಗಿರುವ ರಮೇಶ ಪತ್ನಿಯ ಕತ್ತು, ಹೊಟ್ಟೆಗೆ ಚಾಕುವಿನಿಂದ ಇರಿದು ನಂತರ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅರ್ಪಿತಾ ಮೃತಪಟ್ಟಿದ್ದಾರೆ. ರಮೇಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

7 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹೊಸಕೋಟೆಯಲ್ಲಿ ವಾಸಿಸುತ್ತಿದ್ದ ಇಬ್ಬರ ನಡುವೆ ಜಗಳವಾಗಿ ಪೋಲಿಸ್ ಠಾಣೆ ಮೆಟ್ಟಿಲೇರಿದ್ದು, ವಿಚ್ಛೇದನಕ್ಕೆ ಅರ್ಜಿ ಕೂಡ ಸಲ್ಲಿಸಿದ್ದರು ಎನ್ನಲಾಗಿದೆ.

ಭಾನುವಾರ ಬೆಳಿಗ್ಗೆ ಪತ್ನಿಯನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲ್ಲಗುಂಪೇ ಕೈಗಾರಿಕಾ ಪ್ರದೇಶಕ್ಕೆ ಕರೆದುಕೊಂಡು ಬಂದಿದ್ದ ರಮೇಶ ಚಾಕುವಿನಿಂದ 15 ಬಾರಿ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೂಲಿಬೆಲೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ನಿ ಅನೈತಿಕ ಸಂಬಂಧ ಹೊಂದಿರುವಳೆಂಬ ಅನುಮಾನದಿಂದ ಇಂತಹ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.