ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಾಹಿತೆಯೊಂದಿಗೆ ಅನೈತಿಕ ಸಂಬಂಧದ ಅನುಮಾನ : ಯುವಕನ ಕೊಚ್ಚಿ ಕೊಲೆಗೈದು ಪರಾರಿ

ಬೆಳಗಾವಿ : ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ಬುಧವಾರ ರಾತ್ರಿ ಯುವಕನೊಬ್ಬ ಬಸ್ ನಿಂದ ಇಳಿಯುತ್ತಿದಂತೆ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಯುವಕ ಬುಧವಾರ ರಾತ್ರಿ ಬಸ್ ನಿಂದ ಇಳಿದು ಮ ನೆಕಡೆ ಹೊರಟ್ಟಿದ್ದ. ಈ ವೇಳೆ ಏಕಾಎಕಿ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಮಹಾಂತೇಶ ಬುಕನಟ್ಟಿ (24) ಕೊಲೆಯಾದ ಯುವಕ. ಯುವಕನನ್ನು ಕೊಲೆ ಮಾಡಿದ ಆರೋಪಿಗಳು ಸ್ಥಳದಲ್ಲೇ ಮಚ್ಚು ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಇದೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.