LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಸ್ಪೆಲ್ಲಿಂಗ್ ತಪ್ಪಾದ ಮಾತ್ರಕ್ಕೆ ಜನರ ಹಕ್ಕು ಕಿತ್ತುಕೊಳ್ಳುವುದು ತಪ್ಪು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ತಮ್ಮ ವಿರೋಧ ಇಲ್ಲ. ಆದರೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಸ್ಪಷ್ಟ ಉತ್ತರ ನೀಡಿದ ಬಳಿಕವೇ ಈ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಎಸ್‌ಐಆರ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ, ಈ ವಿಷಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲೂ ಚರ್ಚಿಸಿ ಹಲವು ಆಕ್ಷೇಪಗಳನ್ನು ದಾಖಲಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗೂ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲಾಗಿದ್ದು, ಮತದಾರರನ್ನು ಯಾವ ಮಾನದಂಡದ ಆಧಾರದ ಮೇಲೆ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬ ಬಗ್ಗೆ ಸ್ಪಷ್ಟನೆ ಕೇಳಲಾಗಿದೆ ಎಂದು ಹೇಳಿದರು.

ಯಾವುದೇ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೊದಲು ಸೂಕ್ತ ಕಾರಣ ನೀಡಬೇಕು. ದಾಖಲೆಗಳಲ್ಲಿ ಕೇವಲ ಕಾಗುಣಿತದ ತಪ್ಪು ಅಥವಾ ಸಣ್ಣ ಲೋಪಗಳಿರುವುದನ್ನು ಆಧಾರವಾಗಿಟ್ಟುಕೊಂಡು ಮತದಾನದಂತಹ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಅವಕಾಶ ಇರಬಾರದು. ಈ ಕುರಿತು ನಾವು ಕೇಳಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಇದುವರೆಗೆ ಯಾವುದೇ ಉತ್ತರ ನೀಡಿಲ್ಲ ಎಂದು ಅವರು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ನಾವು ಹೇಳುತ್ತಿಲ್ಲ. ಬದಲಾಗಿ ರಾಜ್ಯಕ್ಕೆ ದೋಷರಹಿತ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ನೀಡಬೇಕು ಎಂಬುದೇ ನಮ್ಮ ಆಗ್ರಹವಾಗಿದೆ. ಪ್ರತಿಯೊಂದು ಕ್ರಮವೂ ಪಾರದರ್ಶಕವಾಗಿರಬೇಕು ಮತ್ತು ಸಾರ್ವಜನಿಕರಲ್ಲಿ ಯಾವುದೇ ಅನುಮಾನಕ್ಕೆ ಅವಕಾಶ ಇರಬಾರದು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡುವ ಸಂದರ್ಭದಲ್ಲಿ ನಾಗರಿಕರಿಗೆ ತಮ್ಮ ಆಕ್ಷೇಪವನ್ನು ನ್ಯಾಯಮಂಡಳಿಯಲ್ಲಿ ಮಂಡಿಸುವ ಅವಕಾಶ ಕಲ್ಪಿಸಬೇಕು. ಆದರೆ ಅಂತಹ ಅವಕಾಶಗಳನ್ನೇ ಸೀಮಿತಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ಜನರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಕ್ರಮವನ್ನು ಒಪ್ಪಲಾಗದು ಎಂದು ಅವರು ಹೇಳಿದರು.

ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆಯಾಗಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡಿದ್ದೇವೆ. ಅಗತ್ಯವಿದ್ದರೆ ಈ ವಿಷಯವನ್ನು ಕಾನೂನಾತ್ಮಕವಾಗಿಯೂ ಪ್ರಶ್ನಿಸಲಾಗುವುದು ಎಂದು ಅವರು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ನ್ಯಾಯಮಂಡಳಿಯಲ್ಲಿ ವಿಚಾರಣೆ ನಡೆಸಲು ಅವಕಾಶವೇ ಇಲ್ಲದಂತಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸೂಕ್ತ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಾಗ, ಅದಕ್ಕೆ ಹಲವು ವರ್ಷಗಳು ಬೇಕಾಗುತ್ತದೆ ಎಂಬ ಕಾರಣಗಳನ್ನು ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರದ ವೈಫಲ್ಯ ಬಯಲಿಗೆಳೆಯಲು ಸೆ. 1ರಿಂದ ಬಿಜೆಪಿ ಪಾದಯಾತ್ರೆ: ವಿಜಯೇಂದ್ರಜನರ ಆರೋಗ್ಯಕ್ಕಿಂತ ಆಹಾರ ಕಂಪನಿಗಳ ಲಾಬಿ ಮೇಲು! ‘ರೆಡ್‌ ಅಲರ್ಟ್‌’ ಲೇಬಲ್‌ ಪ್ರಸ್ತಾವದಿಂದ ಹಿಂದೆ ಸರಿದ ಸರ್ಕಾರಎಸ್‌ಐಆರ್‌ ಕರಡು ಪಟ್ಟಿಗೆ ನಾಗರಿಕ ಸಂಘಟನೆಗಳ ವಿರೋಧ; ಸೆಪ್ಟೆಂಬರ್‌ 1ರಂದು ಚುನಾವಣಾ ಆಯೋಗ ಚಲೋಅವಧಿ ಮೀರಿದ ಚಾಕೊಲೇಟ್‌ಗಾಗಿ ಕಸದ ರಾಶಿಗೆ ಮುಗಿಬಿದ್ದ ಜನ; ವಿಡಿಯೊ ವೈರಲ್ಅತ್ಯಾಚಾರಿ ಗುರ್ಮೀತ್ ಸಿಂಗ್‌ಗೆ ಮತ್ತೆ ಪೆರೋಲ್; 17ನೇ ಬಾರಿ ಜೈಲಿನಿಂದ ಹೊರಗೆಆಹಾರ ಧಾನ್ಯವನ್ನು ಕಡಿಮೆ ದರದಲ್ಲಿ ನೀಡಿ ಎಥೆನಾಲ್‌ ಖರೀದಿ: ಕೇಂದ್ರದ ವಿಚಿತ್ರ ನೀತಿಗೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರೊಂದಿಗೆ ಘರ್ಷಣೆಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನದೆಹಲಿಯಲ್ಲಿ ರಸ್ತೆ ಅಪಘಾತ: ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಸೇರಿ ಆರು ಮಂದಿಗೆ ಗಾಯಶಾಲೆ ಸರಿಪಡಿಸುವ ಹೋರಾಟಕ್ಕೆ ಹಿಂಸೆಯ ಉತ್ತರ! ರಾಜಸ್ಥಾನದಲ್ಲಿ ಸಿಜೆಪಿ ತಂಡದ ಮೇಲೆ ದಾಳಿ