LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಆ. 13ಕ್ಕೆ ಕರ್ನಾಟಕ ಬಂದ್: ವಾಟಾಳ ನಾಗರಾಜ ಘೋಷಣೆ

ಬೆಂಗಳೂರು, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 13ರಂದು ರಾಜ್ಯಾದ್ಯಂತ ಅಖಂಡ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ಘೋಷಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ವಾಟಾಳ ನಾಗರಾಜ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಕಾವೇರಿ ಜಲವಿವಾದದ ಕುರಿತು ಸುದೀರ್ಘ ಚರ್ಚೆ ನಡೆಸಿ, ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಅಧಿಕೃತವಾಗಿ ಕರೆ ನೀಡುವ ತೀರ್ಮಾನ ಕೈಗೊಳ್ಳಲಾಯಿತು.

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಂತೆ ಒತ್ತಾಯಿಸಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆಗಳನ್ನು ಮತ್ತಷ್ಟು ತೀವ್ರಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಬಂದ್‌ಗೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ವ್ಯಾಪಾರಸ್ಥರು, ಸಾರಿಗೆ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂಪೂರ್ಣ ಬೆಂಬಲ ನೀಡಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು.

ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಈಗಾಗಲೇ ಪ್ರತಿಭಟನೆಗಳು ನಡೆಯುತ್ತಿವೆ. ಹಲವು ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ರಸ್ತೆಗಿಳಿದು ಧರಣಿ ನಡೆಸುತ್ತಿದ್ದು, ನೀರು ಬಿಡುಗಡೆ ತಕ್ಷಣ ಸ್ಥಗಿತಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತಿವೆ.

ಇದೇ ವೇಳೆ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಆಗಸ್ಟ್ 13ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ ಕೋರಿರುವ ವಾಟಾಳ ನಾಗರಾಜ, ಕಾವೇರಿ ಕಾವಲು ಪಡೆ ಸೇರಿದಂತೆ ಕನ್ನಡಪರ ಒಕ್ಕೂಟಗಳು ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿವೆ ಎಂದು ತಿಳಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣಸಮಾಜದ ಜಟಿಲ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಮುಂದಾಗಲಿ: ಡಾ. ಅಲ್ಲಮಪ್ರಭು ಶ್ರೀ