ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೋವಿಡ್‌ ನಿಂದ ೩ ಜನರ ಸಾವು; ಯಾವುದೇ ಕಠಿಣ ಪರಿಸ್ಥಿತಿ ಎದುರಿಸಲು ಸಿದ್ಧ ಎಂದ ಮುಖ್ಯಮಂತ್ರಿ

ಹೊಸದಿಲ್ಲಿ: ಕಳೆದ ನಾಲ್ಕೈದು ದಿನಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ಮಂದಿ ಕೋವಿಡ್ನಿಂದಾಗಿ ಮೃತಪಟ್ಟಿದ್ದು ಕೋವಿಡ್ಪ್ರಕರಣಗಳು ಏರಿಕೆಯಾಗದಂತೆ ತಡೆಯಲು ದೆಹಲಿ ಸರ್ಕಾರ ಎಚ್ಚರ ವಹಿಸಿ, ಯಾವುದೇ ಕಠಿಣ ಪರಿಸ್ಥಿತಿ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಶುಕ್ರವಾರ ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಕೋವಿಡ್ಪರಿಸ್ಥಿತಿ ಅವಲೋಕನ ಸಭೆ ನಡೆಸಿದ ಬಳಿಕ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಸದ್ಯಕ್ಕೆ ಆತಂಕಪಡುವ ಅಗತ್ಯವಿಲ್ಲ. ಎಲ್ಲ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದಿದ್ದಾರೆ.

ಕಳೆದ ನಾಲ್ಕೈದು ದಿನಗಳಲ್ಲಿ ದೆಹಲಿಯಲ್ಲಿ ಮೂರು ಮಂದಿ ಕೋವಿಡ್ನಿಂದಾಗಿ ಮೃತಪಟ್ಟಿದ್ದಾರೆ. ಮೂವರೂ ಗಂಭೀರ ಆರೋಗ್ಯ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎಂದು ಅವರು ಹೇಳಿದರು. ದೆಹಲಿ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ರಾಜಧಾನಿಯಲ್ಲಿ ಶೇ.12.48ರಷ್ಟು ಕೋವಿಡ್ಪಾಸಿಟಿವಿಟಿ ದರದೊಂದಿಗೆ 295 ಹೊಸ ಪ್ರಕರಣಗಳು ಗುರುವಾರ ವರದಿಯಾಗಿವೆ.

ಬುಧವಾರ ಪಾಸಿಟಿವಿಟಿ ದರ 13.89ಕ್ಕೆ ತಲುಪಿತ್ತು. 300 ಹೊರ ಪ್ರಕರಣಗಳು ಪತ್ತೆಯಾಗಿದ್ದವು. ಸೋಂಕಿನಿಂದಾಗಿ ಇಬ್ಬರು ಮೃತಪಟ್ಟಿದ್ದರು. 2022 ಅಗಸ್ಟ 31 ಬಳಿಕ ದಿನವೊಂದರದಲ್ಲಿ ಇಷ್ಟು (300ಕ್ಕಿಂತ ಹೆಚ್ಚು) ಪ್ರಕರಣಗಳು ವರದಿಯಾಗಿರಲಿಲ್ಲ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.