LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಿತ್ತೂರು ಉತ್ಸವದ ವೀರಜ್ಯೋತಿಗೆ ನಾಳೆ ಮುಖ್ಯಮಂತ್ರಿ ಚಾಲನೆ 

ಬೆಂಗಳೂರು: ಬೆಳಗಾವಿಗಷ್ಟೇ ಸೀಮಿತವಾಗಿದ್ದ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಈ ಬಾರಿ ರಾಜ್ಯ ಮಟ್ಟದ ಮನ್ನಣೆ ಸಿಕ್ಕಿದ್ದು, ಅಕ್ಟೋಬರ್​​ 23ರಿಂದ 3 ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದೆ.



ಈ ಹಿನ್ನೆಲೆ ನಾಳೆಯಿಂದ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚರಿಸಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿದರು.



ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾಳೆ ಗಾಂಧಿ ಜಯಂತಿಯಂದು ಬೆಂಗಳೂರಿನ ಪುರಭವನದಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.



ಈಗಾಗಲೇ ಕಿತ್ತೂರು ಉತ್ಸವಕ್ಕೆ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಸಹಯೋಗದಲ್ಲಿ ಅಕ್ಟೋಬರ್​​ 23, 24, 25ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾಹಿತಿ ನೀಡಿದರು.



ಕಿತ್ತೂರು ಉತ್ಸವದ ವೀರಜ್ಯೋತಿ ಯಾತ್ರೆಯು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಂಚರಿಸುತ್ತಿತ್ತು. ಆದರೆ ಈ ವರ್ಷ ವಿಶೇಷವಾಗಿ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನಗಳಿಗೆ ವೀರಜ್ಯೋತಿ ಯಾತ್ರೆ ತಲುಪಲಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪುರಭವನದ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ