LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
National News

ಸಿಜೆಪಿ ಪ್ರತಿಭಟನೆಗೆ ತಡೆ ನೀಡದ ಕೋರ್ಟ

ಹೊಸದಿಲ್ಲಿ, ಅ. 15: ದಿಲ್ಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಕ್ಟೋಬರ್ 16ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಗೆ ತಡೆ ನೀಡಲು ದಿಲ್ಲಿ ಹೈಕೋರ್ಟ ಗುರುವಾರ ನಿರಾಕರಿಸಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ದಿಲ್ಲಿ ಪೊಲೀಸರು ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನ್ಯಾಯಾಲಯ, ಪ್ರತಿಭಟನೆ ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

ಕನ್ನಾಟ್ ಪ್ಲೇಸ್‌ನ ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ನಿತಿನ್ ವಾಸುದೇವ ಸಾಂಬ್ರೆ ಹಾಗೂ ನ್ಯಾಯಮೂರ್ತಿ ಸಂಜಯ್ ಶರ್ಮಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹಬ್ಬದ ಋತುವಿನಲ್ಲಿ ರಾಜಧಾನಿಯ ಪ್ರಮುಖ ವಾಣಿಜ್ಯ ಕೇಂದ್ರದಲ್ಲಿ ಪ್ರತಿಭಟನೆ ನಡೆದರೆ ವ್ಯಾಪಾರ ವಹಿವಾಟಿಗೆ ತೀವ್ರ ಅಡ್ಡಿಯಾಗಲಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಎದುರಾಗಿ ವ್ಯಾಪಾರಿಗಳು ಹಾಗೂ ಬೀದಿಬದಿ ಮಾರಾಟಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ವಾದಿಸಿದರು.

ಸುಪ್ರೀಂ ಕೋರ್ಟ ರೂಪಿಸಿರುವ ಕಾನೂನು ಮಾರ್ಗಸೂಚಿಗಳ ಅನ್ವಯ ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ಸಿಜೆಪಿ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಪೊಲೀಸರ ಹೇಳಿಕೆಯನ್ನು ಪರಿಗಣಿಸಿದ ಹೈಕೋರ್ಟ, ಪ್ರತಿಭಟನೆಗೆ ಮುಂಚಿತವಾಗಿ ತಡೆ ನೀಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಿಲೇವಾರಿ ಮಾಡಿತು.

 

 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST