ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂವರು ಶಂಕಿತ ಉಗ್ರರ ಬಂಧನ : 9 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ 

ಮಂಗಳೂರು : ಶಿವಮೊಗ್ಗದಲ್ಲಿ ಇಬ್ಬರು ಮತ್ತು ಮಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮೂವರನ್ನೂ ಒಂಭತ್ತು ದಿನ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗ ಕೋರ್ಟ ಆದೇಶ ಹೊರಡಿಸಿದೆ.

ಮಂಗಳೂರಿನಲ್ಲಿ ಅನ್ಸರ್ ಎಂಬವನನ್ನು ಪೊಲೀಸರು ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿಟ್ಟು ಆತನ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ಯಾಸಿನ್ ಹಾಗೂ ಮಾಜ್ ಎನ್ನುವವನ್ನು ಪೊಲೀಸರು ಬಂಧಿಸಿದ್ದಾರೆ.

ಶಂಕಿತರು ರಾಜ್ಯದ ಹಲವು ಕಡೆ ಬಾಂಬ್‌ ಸ್ಫೋಟ‌ ಮಾಡುವ ಸಂಚು ರೂಪಿಸುತ್ತಿದ್ದರು ಎನ್ನಲಾಗಿದೆ. ಮೂವರಲ್ಲಿ ಎ1 ಆರೋಪಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶಾರಿಖ‌, ಎ-2 ಮಂಗಳೂರು ಮೂಲದ ಮಾಸ್‌, ಎಲೆಕ್ಟ್ರಿಕ್‌ ಇಂಜಿನಿಯರ್‌ ಆಗಿದ್ದಾನೆ, ಜತೆಗೆ ಶಿವಮೊಗ್ಗ ಸಿದ್ದೇಶ್ವರ ನಗರದ ಎ-3 ಆರೋಪಿ ಯಾಸಿನ್‌ ಎಂದು ಗುರುತಿಸಲಾಗಿದೆ.

ಮೂರನೇ ಆರೋಪಿ ಯಾಸಿನ್‌ ಐಸಿಎಸ್‌ ಉಗ್ರ ನೇರ ಸಂಪರ್ಕ ಹೊಂದಿದ್ದಾನೆ ಎಂದು ತಿಳಿದು ಬಂದಿದೆ. ಶರೀಖ‌ ಎಂಬ ಶಂಕಿತ ಉಗ್ರನಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.