ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ 

ರಾಮದುರ್ಗ : ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹೊಸೂರ ಗ್ರಾಮದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಹೊಸೂರ ಗ್ರಾಮದ ಪಾಂಡಪ್ಪ ದುಂಡಪ್ಪ ಜಟಕನ್ನವರ (35)ವರ್ಷದ ಮೃತದೇಹ ಪತ್ತೆಯಾಗಿದೆ. ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಅಪಘಾತ ಎಂಬ ರೀತಿ ಬಿಂಬಿಸಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಹೊಸೂರ ಪೂಲ್ ಬಳಿ ಶವ ಬಿಸಾಕಿ ಹೋಗಿರುವ ದುಷ್ಕರ್ಮಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದಾರೆ.

ಕಟಕೋಳ ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.