ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವ್ಯಕ್ತಿ ಹೊಟ್ಟೆಯಲ್ಲಿದ್ದ 187 ನಾಣ್ಯ ಹೊರ ತೆಗೆದ ವೈದ್ಯರು 

ಬಾಗಲಕೋಟ: ಜಿಲ್ಲೆಯ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು ವ್ಯಕ್ತಿ ಹೊಟ್ಟೆಯಲ್ಲಿದ್ದ 187 ನಾಣ್ಯಗಳನ್ನು ಹೊರತೆಗೆದು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.



ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸಂತೆಕೆಲ್ಲೂರು ಗ್ರಾಮದ ದ್ಯಾ‌ಮಪ್ಪ ಹರಿಜನ ಎಂಬ 58 ವರ್ಷದ ವೃದ್ಧ ನಾಣ್ಯ ನುಂಗಿದ್ದರು.

ಸದ್ಯ ಕುಮಾರೇಶ್ವರ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ 5 ರೂಪಾಯಿಯ 56 ನಾಣ್ಯ, 2 ರೂಪಾಯಿಯ 51 ನಾಣ್ಯ ಹಾಗೂ 1ರ 80 ನಾಣ್ಯಗಳು ಸೇರಿ ಒಟ್ಟು 187 ನಾಣ್ಯಗಳನ್ನು ಹೊರ ತೆಗೆದಿದ್ದಾರೆ.

ಬಾಗಲಕೋಟ ಕುಮಾರೇಶ್ವರ ಆಸ್ಪತ್ರೆಗೆ ವೃದ್ದ ದಾಖಲಾಗಿದ್ದರು. ಎಕ್ಸರೇಯಲ್ಲಿ ನಾಣ್ಯಗಳು ಪತ್ತೆಯಾಗಿದ್ದವು. ವ್ಯಕ್ತಿ ಜೀವ ಅಪಾಯದಲ್ಲಿರುವುದನ್ನು ಅರಿತ ವೈದ್ಯರು ಎಂಡೋಸ್ಕೋಪಿ ಮಾಡಿ ನಾಣ್ಯಗಳನ್ನು ಹೊರತೆಗೆದಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.