ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೀದಿನಾಯಿ ದಾಳಿಗೆ ಗಾಯಗೊಂಡಿದ್ದ ಬಾಲಕಿ ಮೃತ್ಯು

ಬಾಗಲಕೋಟ : ಬೀದಿನಾಯಿ ದಾಳಿಯಿಂದಾಗಿ ಬಾಗಲಕೋಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

10 ವರ್ಷದ ಅಲೈನಾ ಲೋಕಾಪುರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ನತದೃಸ್ಟೆ. ಬಾಗಲಕೋಟ ಜಿಲ್ಲೆಯ ನವನಗರದ ಸೆಕ್ಟರ್ ನಂ.15ರಲ್ಲಿ ಬಾಲಕಿ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಬಾಲಕಿಯ ಕಣ್ಣು, ಮೂಗು, ಮುಖದ ಮೇಲೆ ಗಂಭೀರ ಗಾಯಗಳಾಗಿದ್ದವು.

ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಬುಧವಾರ ಸಾವನ್ನಪ್ಪಿದ್ದಾಳೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.