LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ದಪ್ಪಗಿದ್ದಾಳೆ ಎಂದು ಪತ್ನಿಯ ಕತ್ತು ಹಿಸುಕಿ ಕೊಂದ ಪತಿ!

ಧಾರವಾಡ, ಜುಲೈ 1: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಪತ್ನಿ ದಪ್ಪಗಿದ್ದಾಳೆ ಎಂಬ ಕಾರಣ ಹೇಳಿ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಪತಿ ಬಸವರಾಜ ವಡ್ಡರನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪ್ರಿಯಾಂಕಾ ಕಮಲಾಕರ (29) ಎಂದು ಗುರುತಿಸಲಾಗಿದೆ. 2024ರಲ್ಲಿ ಬಸವರಾಜ ಮತ್ತು ಪ್ರಿಯಾಂಕಾ ವಿವಾಹವಾಗಿದ್ದು, ಮದುವೆಯಾದ ಬಳಿಕ ಪತ್ನಿಗೆ ವರದಕ್ಷಿಣೆಗಾಗಿ ನಿರಂತರ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

ತವರು ಮನೆಯಿಂದ ಹಣ ಹಾಗೂ ಚಿನ್ನ ತರುವಂತೆ ಒತ್ತಾಯಿಸುತ್ತಿದ್ದ ಆರೋಪಿಯು, "ನೀನು ದಪ್ಪಗಿದ್ದೀಯ, ಗರ್ಭಿಣಿಯಾಗುವುದಿಲ್ಲ" ಎಂದು ಅವಮಾನಿಸುತ್ತಿದ್ದನೆಂದು ಮೃತಳ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಇದೇ ವಿಚಾರವನ್ನು ನೆಪ ಮಾಡಿಕೊಂಡು ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಎರಡು ದಿನಗಳ ಹಿಂದೆಯೇ ನಡೆದಿದ್ದರೂ, ಮಂಗಳವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆರೋಪಿಯು ಪ್ರಿಯಾಂಕಾ ಸಾವಿನ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾನೆ. ಮಾಹಿತಿ ತಿಳಿದ ಮೃತಳ ಪೋಷಕರು ಕಲಬುರಗಿಯಿಂದ ನವಲಗುಂದಕ್ಕೆ ಆಗಮಿಸಿ, ಮಂಗಳವಾರ ತಡರಾತ್ರಿ ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ನವಲಗುಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೊಲೆಗೆ ನಿಖರ ಕಾರಣ ಹಾಗೂ ಇತರೆ ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಡುಹಂದಿಗಳ ದಾಳಿಗೆ ಕಬ್ಬು ಬೆಳೆ ನಾಶಗದ್ದಲದ ನಡುವೆಯೇ ಮುಕ್ತಾಯ ಕಂಡ ಸಂಸತ್ ಅಧಿವೇಶನ: ಚರ್ಚೆಯಿಲ್ಲದೆ 11 ಮಸೂದೆಗಳ ಅಂಗೀಕಾರ300 ಅಡಿ ಕುಸಿದ ವಿಮಾನ, ಪೈಲಟ್ ಗಾಂಜಾ ಸೇವನೆ ಪತ್ತೆ!ಮಾನವ ಹಕ್ಕುಗಳ ಪಾಠ ನಿಲ್ಲಿಸಿ; ಫ್ರಾನ್ಸ್ ವಿರುದ್ಧ ಇರಾನ್ ಕಿಡಿ25 ಬಿಜೆಪಿ ನಾಯಕರು, ಹಿಂದುತ್ವ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಲು ನ್ಯಾಯಾಲಯದ ಅನುಮತಿ!ದೇಶಕ್ಕೇ ಮಾದರಿಯಾಗುವಂತೆ ಗಣೇಶೋತ್ಸವ ಆಚರಿಸೋಣಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವನಲ್ಲಿ ಅಶ್ಲೀಲ ವಿಡಿಯೋ ಪತ್ತೆ ; ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಲಡಾಖ್‌ನ ಲೇಹ್‌ನಲ್ಲಿ 5.5 ತೀವ್ರತೆಯ ಭೂಕಂಪದೇಶಭಕ್ತಿಯ ಸರ್ಟಿಫಿಕೇಟ್ ನೀಡುವ ಮುನ್ನ ಆರ್‌ಎಸ್‌ಎಸ್‌ ತ್ರಿವರ್ಣ ಧ್ವಜದ ಇತಿಹಾಸ ಹೇಳಲಿ: ಪ್ರಿಯಾಂಕ್ ಖರ್ಗೆಖರ್ಗೆ ರ‍್ಯಾಲಿ ನಡೆದ ಸ್ಥಳದಲ್ಲಿ ‘ಶುದ್ಧೀಕರಣ’ ಹವನ; ಬಿಜೆಪಿ–ಕಾಂಗ್ರೆಸ್ ನಡುವೆ ವಾಕ್ಸಮರ