LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪತ್ನಿಯ ಉಸಿರುಗಟ್ಟಿಸಿ ಕೊಲೆಗೈದ ಪತಿಗೆ ಶಿಕ್ಷೆ ಜಾರಿ

ಬೆಳಗಾವಿ :



ಪತ್ನಿಯನ್ನು ಕೊಲೆಗೈದ ಪತಿಗೆ ಬೆಳಗಾವಿಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ ಕಠಿಣ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.



ಮೂಲತಃ ವಿಜಯಪುರ ಜಿಲ್ಲೆ ತಾಳಿಕೋಟಿಯ

ಪರಶುರಾಮ ಗಣಪತಿ ಪೀಸೆ(40)ಶಿಕ್ಷೆಗೊಳಗಾದ ಆರೋಪಿ.



2020 ರ ಫೆಬ್ರವರಿ 13 ರಂದು ಮಧ್ಯಾಹ್ನ 1 ರಿಂದ 1.30 ರ ಸುಮಾರಿಗೆ ಈತ ತನ್ನ ಪತ್ನಿ ಕವಿತಾ ಅವರೊಂದಿಗೆ ತನ್ನ ಸಣ್ಣ ಮಕ್ಕಳನ್ನು ಎತ್ತಿಕೊಳ್ಳುವ ವಿಚಾರದಲ್ಲಿ ತಂಟೆ ತೆಗೆದು ಅದೇ ಸಿಟ್ಟಿನಿಂದ ಅವರ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆಗೈದಿದ್ದ. ಈ ಬಗ್ಗೆ ಕವಿತಾ ಅವರ ತಂದೆ ಕಲಬುರ್ಗಿಯ ಸುನಿಲ್ ಕುಮಾರ್ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಅಂದಿನ ಕ್ಯಾಂಪ್ ಪೊಲೀಸ್ ಠಾಣೆಯ ಪಿ ಐ ಡಿ.ಸಂತೋಷ ಕುಮಾರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರ ಸರ್ಕಾರಿ ಅಭಿಯೋಜಕ ಐ.ಎಂ.ಮಠಪತಿ ವಾದ ಮಂಡಿಸಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ