LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಕೊನೆ ಘಳಿಗೆಯಲ್ಲಿ ಬೆಳಗಾವಿ ಭೇಟಿ ರದ್ದು ಮಾಡಿದ ಮಹಾರಾಷ್ಟ್ರ ಸಚಿವರು

ಬೆಳಗಾವಿ: ಬೆಳಗಾವಿ ಭೇಟಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ ಹೀಗಾಗಿ ಬೆಳಗಾವಿಯ ಇಂದಿನ ಭೇಟಿಯನ್ನು ರದ್ದುಗೊಳಿಸಿದ್ದೇವೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ ಹೇಳಿದ್ದಾರೆ.



ಮೊದಲಿಗೆ ಡಿಸೆಂಬರ್ 3 ರಂದು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದರೆ, ಕೆಲವು ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬರಲು ಮನವಿ ಮಾಡಿದ್ದರಿಂದ ಡಿಸೆಂಬರ್ 6 ರಂದು ಬೆಳಗಾವಿಗೆ ತೆರಳಲು ನಿರ್ಧರಿಸಿದ್ದೆವು. ಇಂದು ಡಾ. ಬಿಆರ್ ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನವಾಗಿದ್ದು, ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆ ನಡೆಯಬಾರದು, ಕಾನೂನು ವ್ಯವಸ್ಥೆಗೆ ಧಕ್ಕೆ ಆಗಬಾರದೆಂದು ಬೆಳಗಾವಿ ಭೇಟಿ ರದ್ದು ಮಾಡಲಾಗಿದೆ ಎಂದರು.



ಶ್ರದ್ಧಾಂಜಲಿ ಸಲ್ಲಿಕೆಗೆ ನಮಗೆ ಅನುಮತಿ ನೀಡಬಹುದಿತ್ತು. ಕರ್ನಾಟಕ ಸರ್ಕಾರ ಅವಕಾಶ ಕಲ್ಪಿಸಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ, ಅನುಮತಿ ನೀಡಿಲ್ಲ. ಹೀಗಾಗಿ ಬೆಳಗಾವಿ ಭೇಟಿ ರದ್ದು ಮಾಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ ದೇಸಾಯಿ ಹೇಳಿದ್ದಾರೆ.



ಇಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜ ದೇಸಾಯಿ ಭೇಟಿ ನೀಡಬೇಕಿತ್ತು, ಆದರೆ ಕರ್ನಾಟಕ ಸರ್ಕಾರ ಅವಕಾಶ ಕೊಟ್ಟಿಲ್ಲ. ಕಾರಣ ಕೊನೆ ಘಳಿಗೆಯಲ್ಲಿ ಭೇಟಿ ರದ್ದು ಮಾಡಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ