ಚೀನಾದೊಂದಿಗಿನ ಹೆಚ್ಚುತ್ತಿರುವ ಗಡಿ ಉದ್ವಿಗ್ನತೆಯ ನಡುವೆ, ಭಾರತ ಗುರುವಾರ ಅಗ್ನಿ-5 ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದೆ.
ಅಗ್ನಿ-5 ಕ್ಷಿಪಣಿ 5,000 ಕಿ.ಮೀ.ಗೂ ಮೀರಿದ ಗುರಿಗಳನ್ನು ಅತಿ ಹೆಚ್ಚು ನಿಖರತೆಯೊಂದಿಗೆ ಹೊಡೆಯಬಲ್ಲದು. ಮೊದಲಿಗಿಂತ ಈಗ ಹಗುರವಾಗಿರುವ ಕ್ಷಿಪಣಿಯಲ್ಲಿ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಅಗತ್ಯವಿದ್ದಲ್ಲಿ ಅಗ್ನಿ-5 ಕ್ಷಿಪಣಿಯ ವ್ಯಾಪ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಪ್ರಯೋಗವು ಸಾಬೀತುಪಡಿಸಿದೆ ಎಂದು ಮೂಲಗಳು ತಿಳಿಸಿವೆ.