LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಎಂ.ಕೆ.ಹುಬ್ಬಳ್ಳಿ ಸಾರ್ವಜನಿಕ ಗ್ರಂಥಾಲಯದ ದುಸ್ಥಿತಿ!

ಎಂ.ಕೆ.ಹುಬ್ಬಳ್ಳಿ, ಮೇ 24 : ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯ ಸಾರ್ವಜನಿಕ ಗ್ರಂಥಾಲಯ ಕಟ್ಟಡ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ಶಿಥಿಲಾವಸ್ಥೆಗೆ ತಲುಪಿದೆ. ಈಗಿನ ಸ್ಥಿತಿಯಲ್ಲಿ ಗ್ರಂಥಾಲಯ ಸಾರ್ವಜನಿಕರಿಗೆ ಸಂಪೂರ್ಣ ನಿರುಪಯುಕ್ತವಾಗಿದ್ದು, ತಕ್ಷಣ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬುಬಕರ ಖಾದ್ರಿ ಆಗ್ರಹಿಸಿದ್ದಾರೆ.

news_1779635051_0_751.webp

ಗ್ರಂಥಾಲಯದ ಮೇಲ್ಛಾವಣಿ ಕುಸಿಯುವ ಹಂತದಲ್ಲಿದ್ದು, ಗೋಡೆಗಳು ಸೇರಿದಂತೆ ಕಟ್ಟಡದ ಸ್ಥಿತಿ ಅಪಾಯಕಾರಿಯಾಗಿದೆ. ಗ್ರಂಥಾಲಯದ ಒಳಭಾಗದಲ್ಲಿಯೂ ಮೂಲಭೂತ ಸೌಲಭ್ಯಗಳ ಕೊರತೆ ಸ್ಪಷ್ಟವಾಗಿದ್ದು, ಓದುಗರಿಗೆ ಅಗತ್ಯವಾದ ಟೇಬಲ್ ಮತ್ತು ಕುರ್ಚಿಗಳ ವ್ಯವಸ್ಥೆಯೇ ಇಲ್ಲ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಇದರಿಂದ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.

news_1779635051_1_614.webp

ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯಗಳನ್ನೇ ಹೆಚ್ಚಾಗಿ ಅವಲಂಬಿಸಿರುವ ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವರ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಯಾವುದೇ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಬುಬಕರ ಖಾದ್ರಿ ಒತ್ತಾಯಿಸಿದ್ದಾರೆ.

news_1779635051_2_360.webp

 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ