ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ 

ಬೆಂಗಳೂರು : ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ಪರಿಷ್ಕ್ರತ ದರ ಜಾರಿಯಾಗಲಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ. ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸ್ಪೆಷಲ್ ಹಾಲಿನ ದರ 43 ರಿಂದ 46 ರೂಗೆ ಹೆಚ್ಚಳ ಮಾಡಲಾಗಿದೆ. ಟೋನ್ಡ್ ಹಾಲಿನ ದರ ಪ್ರತಿ ಲೀಟರ್ ಗೆ 37 ರಿಂದ 40 ರೂಗೆ ಹೆಚ್ಚಳವಾಗಿದೆ. ಸಮೃದ್ದಿ ಹಾಲಿನ ದರ 48 ರಿಂದ 51 ರೂ ಗೆ ಹೆಚ್ಚಳವಾಗಿದೆ ಹಾಗೂ ಮೊಸರಿನ ಬೆಲೆ ಕೆಜಿಗೆ 45 ರಿಂದ 48 ರೂ ಹೆಚ್ಚಳವಾಗಿದೆ. ಈ ಹಣವನ್ನು ನೇರವಾಗಿ ರೈತರಿಗೆ ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಳಲುತ್ತಿರುವ ರಾಜ್ಯದ ಜನತೆಯ ಗಾಯದ ಮೇಲೆ ಬರೆ ಎಳೆಯಲಾಗಿದೆ. ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇತ್ತೀಚೆಗೆ ಹೇಳಿದ್ದರು.

ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.