LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
National News

ಮಹಿಳೆಯರ ರಕ್ಷಣೆಗೆ ಸುಪ್ರೀಂ ಕೋರ್ಟೇ ಎಚ್ಚರಿಸಬೇಕಾದ ದುಃಸ್ಥಿತಿ!

ಹೊಸದಿಲ್ಲಿ, ಅ. 5 : ಮಹಿಳೆಯರ ವಿರುದ್ಧ ಅಪರಾಧ ಎಸಗುವ ಸಮಾಜಘಾತುಕ ಶಕ್ತಿಗಳು ಮತ್ತು ಗೂಂಡಾಗಳಲ್ಲಿ ಕಾನೂನಿನ ಭಯ ಹುಟ್ಟಿಸುವ ತುರ್ತು ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ ಸೋಮವಾರ ಹೇಳಿದೆ. ಮಹಿಳೆಯರ ಸುರಕ್ಷತೆಯಂತಹ ಮೂಲಭೂತ ವಿಷಯದಲ್ಲೂ ದೇಶದ ಅತ್ಯುನ್ನತ ನ್ಯಾಯಾಲಯವೇ ಪೊಲೀಸರಿಗೆ ಇಂತಹ ಎಚ್ಚರಿಕೆ ಮತ್ತು ಸಲಹೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದಕರ ಸಂಗತಿಯಾಗಿದೆ.

ದೆಹಲಿ-ಎನ್‌ಸಿಆರ್‌ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ. ವಿನೋದ ಚಂದ್ರನ್ ಅವರ ಪೀಠ, ರಾಷ್ಟ್ರ ರಾಜಧಾನಿಯ ಸೂಕ್ಷ್ಮ ಪ್ರದೇಶಗಳಲ್ಲಿಯೂ ಮಹಿಳೆಯರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿದೆ.

“ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ರಾತ್ರಿ 11 ಗಂಟೆಯಾದರೂ ಮಹಿಳೆಯರು ರಸ್ತೆಯಲ್ಲಾಗಲಿ, ಮೆಟ್ರೊದಲ್ಲಾಗಲಿ ಯಾವುದೇ ಭಯವಿಲ್ಲದೆ ಸಂಚರಿಸುವಂತಹ ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು” ಎಂದು ಪೀಠ ಹೇಳಿದೆ.

ಅಪರಾಧ ನಡೆದ ಬಳಿಕ ಕ್ರಮ ಕೈಗೊಳ್ಳುವುದಕ್ಕಿಂತ ಅಪರಾಧ ನಡೆಯದಂತೆ ತಡೆಯುವುದೇ ಅತ್ಯಂತ ಮುಖ್ಯ ಎಂದು ನ್ಯಾಯಾಲಯ ಒತ್ತಿಹೇಳಿದೆ. ಮಹಿಳೆಯರ ವಿರುದ್ಧ ಅಪರಾಧ ಕೃತ್ಯಗಳಲ್ಲಿ ತೊಡಗುವ ಸಮಾಜಘಾತುಕ ಶಕ್ತಿಗಳು ಮತ್ತು ಪುಂಡರಲ್ಲಿ ಪೊಲೀಸರು ಕಾನೂನಿನ ಭಯ ಹುಟ್ಟಿಸುವಂತಿರಬೇಕು ಎಂದು ಸೂಚಿಸಿದೆ.

ಮಹಿಳೆಯರು ರಾತ್ರಿ ವೇಳೆ ನಿರ್ಭಯವಾಗಿ ಸಂಚರಿಸುವ ವಾತಾವರಣ ಕಲ್ಪಿಸುವುದು ಆಡಳಿತ ಮತ್ತು ಪೊಲೀಸ್ ವ್ಯವಸ್ಥೆಯ ಮೂಲಭೂತ ಹೊಣೆಗಾರಿಕೆ. ಇಂತಹ ವಿಷಯದಲ್ಲೂ ಸುಪ್ರೀಂ ಕೋರ್ಟ ಮಧ್ಯಪ್ರವೇಶಿಸಿ, ಅಪರಾಧಿಗಳಲ್ಲಿ ಕಾನೂನಿನ ಭಯ ಹುಟ್ಟಿಸುವಂತೆ ಪೊಲೀಸರಿಗೆ ಹೇಳಬೇಕಾಗಿರುವುದು ಮಹಿಳಾ ಸುರಕ್ಷತಾ ವ್ಯವಸ್ಥೆಯ ಸ್ಥಿತಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತ ಮಾಧ್ಯಮ ವರದಿಗಳನ್ನು ಆಧರಿಸಿ ಸುಪ್ರೀಂ ಕೋರ್ಟ ಸೆಪ್ಟೆಂಬರ್ 28ರಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಇಂತಹ ಘಟನೆಗಳು ಕಾನೂನು ಜಾರಿ ವ್ಯವಸ್ಥೆಯಲ್ಲಿನ ಲೋಪಗಳನ್ನು ಎತ್ತಿ ತೋರಿಸುತ್ತವೆ ಎಂದು ನ್ಯಾಯಾಲಯ ಈ ಹಿಂದೆಯೂ ಕಳವಳ ವ್ಯಕ್ತಪಡಿಸಿತ್ತು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಡಿಲು ಬಡಿದು ಎರಡು ಹಸು ಸಾವುಐಎಚ್‌ಆರ್‌ಸಿ ಬೆಳಗಾವಿ ಜಿಲ್ಲಾ ಮಂಡಳಿ ಅಧ್ಯಕ್ಷರಾಗಿ ಅಬ್ದುಲ್ ಅಜೀಜ ಶೇಖ ನೇಮಕಚುಳಕಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ-ಖೋಖೋ ಕ್ರೀಡಾಕೂಟಕ್ಕೆ ಚಾಲನೆಮೊಬೈಲ್ ಟವರ್ ಆಮಿಷ, ಫೇಸ್‌ಬುಕ್ ಲಿಂಕ್: ಅಥಣಿಯ ಇಬ್ಬರು ರೈತರಿಗೆ ₹4.04 ಲಕ್ಷ ವಂಚನೆಅಥಣಿ ಲಾಡ್ಜನಲ್ಲಿ ವೇಶ್ಯಾವಾಟಿಕೆ ಆರೋಪ: ಮಹಿಳೆ ರಕ್ಷಣೆ, ಓರ್ವ ಬಂಧನಹಸುಗಳಿಗೆ ಮೇವು ಹಾಕುವ ವಿಚಾರಕ್ಕೆ ಜಗಳ: ಪತ್ನಿಯನ್ನು ಕುಡಗೋಲಿನಿಂದ ಕೊಚ್ಚಿ ಹತ್ಯೆಬಿಜೆಪಿ ಮುಖಂಡ ರವಿ ಪಾಟೀಲಗೆ ನಿರೀಕ್ಷಣಾ ಜಾಮೀನುಮೋದಿ-ಶಾ ಸೂಚನೆಯಂತೆ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದ್ರೋಹ: ಕಾಂಗ್ರೆಸ್ಮಹಿಳಾ ಪತ್ರಕರ್ತೆಯರ ಪೊಲೀಸರ ಲೈಂಗಿಕ ಕಿರುಕುಳ ; ಎಫ್‌ಐಆರ್‌ಗೆ ಒತ್ತಾಯಿಸಿದವರು ವಶಕ್ಕೆಇದು ಗುಜರಾತ್, ಯುಪಿ ಅಲ್ಲ; ಕಾನೂನು ಮುರಿದರೆ ಪರಿಣಾಮ ಎದುರಿಸಿ: ಪ್ರಿಯಾಂಕ್ ಖರ್ಗೆ