ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ನೂ ೫ ದಿನ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು, ೧೧- ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಬೀದರ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ ಜಿಲ್ಲೆಗಳು ಮಳೆಯ ಮತ್ತೆ ತೀವ್ರ ಹೊಡೆತಕ್ಕೆ ಸಿಲುಕಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ವರೆಗೆ ವಿಸ್ತರಿಸಿದೆ.

ರಾಯಲಸೀಮಾ, ತೆಲಂಗಾಣ, ವಿದರ್ಭ ಮತ್ತು ಪಶ್ಚಿಮ ಮಧ್ಯಪ್ರದೇಶದಾದ್ಯಂತ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಉತ್ತರ ತಮಿಳುನಾಡು ಮತ್ತು ನೆರೆಹೊರೆ ಅಥವಾ ಪೂರ್ವ ರಾಜಸ್ಥಾನದ ಮೇಲೆ ಚಂಡಮಾರುತದ ಪರಿಚಲನೆ ಇದೆ ಎನ್ನಲಾಗಿದೆ.

ನೈಋತ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಉತ್ತರ ಶ್ರೀಲಂಕಾ ಕರಾವಳಿಯ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇದೆ. ಗುಡುಗು, ಮಿಂಚು, ಜೋರಾದ ಗಾಳಿ ಮತ್ತು ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.