LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಪತಿಯ ಮೇಲೆಯೇ ಕಾದ ಎಣ್ಣೆ ಸುರಿದು ಹತ್ಯೆಗೈಯ್ಯಲು ಯತ್ನಿಸಿದ ಪತ್ನಿ

ಬೆಳಗಾವಿ: ಪತಿಯ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಬಳಿ ನಡೆದಿದೆ.



ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಪಾಟೀಲ್ (55) ಮೇಲೆ ಪತ್ನಿ ವೈಶಾಲಿ ಕಾದ ಎಣ್ಣೆ ಸುರಿದಿದ್ದಾಳೆ. ಸುಭಾಷ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.



ಸುಭಾಷ್ ಸಿಲಿಂಡರ್ ವಿತರಣೆ ಕೆಲಸ ಮಾಡುತ್ತಿದ್ದರು. ಪತ್ನಿ ವೈಶಾಲಿಗೆ ಪತಿ ಮೇಲೆ ಅನುಮಾನ. ಪತಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಮನೆಗೆ ಬಂದ ಪತಿ ಮೇಳೆ ಬಿಸಿ ಎಣ್ಣೆ ಸುರಿದಿದ್ದಾಳೆ.



ಸೋಮವಾರ ಮಧ್ಯಾಹ್ನ ಅವರ ಪತ್ನಿ ವೈಶಾಲಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಜಗಳವಾಗಿದೆ. ಸುಭಾಷ್ ಅವರ ತಲೆಯ ಮೇಲೆ ಎಣ್ಣೆ ಸುರಿದಿದ್ದಾರೆ. ಸುಭಾಷ್ ಗಂಭೀರ ಗಾಯಗೊಂಡು ತಲೆ, ಕಣ್ಣು ಮತ್ತು ದೇಹದ ಇತರ ಭಾಗಗಳಿಗೂ ಬಿಸಿ ಎಣ್ಣೆ ಹರಡಿದೆ. ನೋವು ತಾಳಲಾರದೆ ನೀರಿನ ಟ್ಯಾಂಕಿಗೆ ಹಾರಿದ್ದಾರೆ ಎಂದು ಮೂಲಗಳು ತಿಳಿಸಿವೆ.



ಗಾಯಾಳು ಸುಭಾಷ್ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ