ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಇಲ್ಲ

ಬೆಂಗಳೂರು : ಗ್ರಾಮ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಓಗಳಿಗೆ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.

ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.