LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಕಳಸಾ ಬಂಡೂರಿ ಯೋಜನೆ ಕುರಿತ ಕೇಂದ್ರದ ಆದೇಶದಲ್ಲಿ ದಿನಾಂಕೇ ಇಲ್ಲ: ಜನರ ದಾರಿ ತಪ್ಪಿಸುವ ಕ್ರಮ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ಜನರ ದಾರಿ ತಪ್ಪಿಸುವ ಕೆಲಸ ನಡೆದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್ ಕೆ ಪಾಟೀಲ ಆರೋಪಿಸಿದ್ದಾರೆ.



ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಸರ್ಕಾರದಿಂದ ಹೊರಡಿಸುವ ಯಾವುದೇ ಆದೇಶದ ಪ್ರತಿಗೆ ದಿನಾಂಕ ಇದ್ದೇ ಇರುತ್ತದೆ. ಆದರೆ ಈ ಆದೇಶದಲ್ಲಿ ಯಾವುದೇ ದಿನಾಂಕ ಇಲ್ಲ. ಇದು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು.



2002ರಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅಲ್ಲಿ ಈಗಾಗಲೇ ಕಾಮಗಾರಿ ಸಹ ಆರಂಭವಾಗಿದೆ. ಈ ಎಲ್ಲಾ ಕಾಮಗಾರಿಗಳು ಡಿಪಿಆರ್ ಇಲ್ಲದೇ ನಡೆದಿವೆಯೇ? ಕೆಲಸ ಮಾಡುವ ಹಂತದಲ್ಲಿ ಯೋಜನೆ ಇರುವಾಗ ಡಿಪಿಆರ್ ಎನ್ನುವ ಒಂದನೇ ತರಗತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪಾಟೀಲ ವ್ಯಂಗ್ಯವಾಡಿದರು.



ದಿನಾಂಕ ಇಲ್ಲದ ಆದೇಶದ ಪ್ರತಿಯನ್ನು ಕೇಂದ್ರ ಸಚಿವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅದನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದನದಲ್ಲಿ ಪ್ರದರ್ಶಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಜನರ ದಾರಿ ತಪ್ಪಿಸುವುದು ಬಿಜೆಪಿಯ ತಂತ್ರವಾಗಿದೆ ಎಂದು ಎಚ್ ಕೆ ಪಾಟೀಲ ಹೇಳಿದರು.



ಕೆಲಸ ಆರಂಭ ಮಾಡಬೇಕಾದ ಸಂದರ್ಭದಲ್ಲಿ ಡಿಪಿಆರ್ ಅನುಮತಿ ಬಗ್ಗೆ ಮಾತನಾಡುತ್ತಿರುವುದು ಪುನಃ ಜನರನ್ನು ಮೋಸ ಮಾಡುವುದಾಗಿದೆ. ಅವರಿಗೆ ಯೋಜನೆ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕಿತ್ತು ಎಂದು ಅವರು ನುಡಿದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿವೃತ್ತ ಶಿಕ್ಷಕ ಶ್ರೀ ಎಸ್. ಎ. ಕೊತವಾಲ್ ನಿಧನನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ವಿಷಯ ತಜ್ಞರೇ ರೂವಾರಿಗಳುಇಂಡಿಯಲ್ಲಿ ಬೀದಿ ನಾಯಿಗಳ ದಾಳಿ: ಇಬ್ಬರು ಮಕ್ಕಳಿಗೆ ಗಂಭೀರ ಗಾಯಬ್ರಹ್ಮಾಂಡ ಭ್ರಷ್ಟಾಚಾರ : ಸಿಬಿಐ ತನಿಖೆ ನಡುವೆಯೂ ಪಿಎನ್‌ಸಿ ಇನ್‌ಫ್ರಾಟೆಕ್‌ಗೆ 3,483 ಕೋಟಿ ರೂ. ಹೆದ್ದಾರಿ ಗುತ್ತಿಗೆಗದ್ದಲದಲ್ಲೇ ಸಾಗಿದ ಸಂಸತ್; ಚರ್ಚೆಯಿಲ್ಲದೆ ತೆರಿಗೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ'ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು' ಎಂದ ರೂಪಾಲಿ ಗಂಗೂಲಿ; ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಧರಣಿಯಲ್ಲಿ ಮೊಳಗಿದ ಏಕತೆಯ ಸಂದೇಶ: ಜಾತಿ–ಧರ್ಮ ಮೀರಿ ವಿದ್ಯಾರ್ಥಿಗಳಿಗೆ ನೆರವುಬೈಕ್–ಬಸ್ ಮುಖಾಮುಖಿ ಡಿಕ್ಕಿ: ತಂದೆ, ಮಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು'ತೆಹೆಲ್ಕಾ' ಪತ್ರಿಕೆ ಮಾಜಿ ಪ್ರಧಾನ ಸಂಪಾದಕ ತರುಣ ತೇಜ್‌ಪಾಲಗೆ 10 ವರ್ಷ ಜೈಲು ಶಿಕ್ಷೆರೈಲು ಹಳಿ ಮಧ್ಯೆ ಕೆಟ್ಟು ನಿಂತ ಶಾಲಾ ವಾಹನ; ಗ್ರಾಮಸ್ಥರ ಸಮಯಪ್ರಜ್ಞೆಗೆ ತಪ್ಪಿದ ಭಾರೀ ದುರಂತ