LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ : ರಮೇಶ ಜಾರಕಿಹೊಳಿ 

ಬೆಳಗಾವಿ: ಮಾಜಿ ಸಚಿವ ರಮೇಶ‌ ಜಾರಕಿಹೊಳಿ ಅವರು ಜೆಡಿಎಸ್‌ ಗೆ ಸೇರುತ್ತಾರೆ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ ಎಂದು ರಮೇಶ‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.



ಬೆಳಗಾವಿ ಸಮೀಪದ ಬೆಳಗುಂದಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನ್ನ ಮನಸ್ಸಿಗೆ ಬೇಜಾರಾಗಿ ಒಂದು ವರ್ಷದಿಂದ ಮಾಧ್ಯಮದಿಂದ ದೂರವಿದ್ದೆ. ಅನಿವಾರ್ಯವಾಗಿ ಇಂದು ಈ ವಿಷಯ ಸ್ಪಷ್ಟಪಡಿಸುವೆ ಎಂದರು.



ಎಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ನನಗೆ ಸುಳ್ಳು ಹೇಳುವ ಚಟವಿಲ್ಲ. ದಿನನಿತ್ಯ ಕುಮಾರಸ್ವಾಮಿ ನನ್ನ ಜೊತೆ ಫೋನ್‍ನಲ್ಲಿ ಮಾತನಾಡುತ್ತೇನೆ. ಆದರೆ ನಾನು ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದರು.



ನಿತ್ಯವೂ ಕುಮಾರಸ್ವಾಮಿ ನನ್ನ ಜೊತೆ ಫೋನ್ ನಲ್ಲಿ ಮಾತನಾಡುತ್ತಿರುತ್ತಾರೆ. ನಿನ್ನ ಕೆಲಸ ನೀನು ಮಾಡು, ನನ್ನ ಕೆಲಸ ನಾನು ಮಾಡುತ್ತೇನೆ. ನಮ್ಮಿಬ್ಬರ ಉದ್ದೇಶ ಒಂದೇ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬಾರದು ಎಂದು ಹೇಳಿದ್ದಾರೆ ಎಂದರು.



ಈ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಕಾದು ನೋಡಿ, ಜೆಡಿಎಸ್ ಬಿಟ್ಟವರೆಲ್ಲಾ ವಾಪಸ್ ಬರ್ತಾರೆ. ಯಾರ್ಯಾರು ಬರ್ತಾರೆ ಅನ್ನೋದನ್ನು ಕಾದು ನೋಡಿ ಎಂದು ಹೇಳಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ