LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಜಿಲ್ಲೆಯಲ್ಲಿ ಸಿಲಿಂಡರ್, ಇಂಧನ ಕೊರತೆ ಇಲ್ಲ, ವದಂತಿ ಹರಡಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ ರೋಷನ್

ಬೆಳಗಾವಿ, ಮಾ.24 : ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆ ಇಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿದರು.


ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಮತ್ತು ನಗರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಂಕ್‌ಗಳಲ್ಲಿ ಸಂಗ್ರಹ ತಾತ್ಕಾಲಿಕವಾಗಿ ಖಾಲಿಯಾದರೂ ಐದು ಗಂಟೆಗಳೊಳಗೆ ಮರುಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.


ಇಂಧನ ಪೂರೈಕೆ ಸಂಸ್ಥೆಗಳು ಹಾಗೂ ಬಂಕ್ ಮಾಲೀಕರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದ್ದು, ಎಲ್ಲಿಯೂ ಕೊರತೆ ಕಂಡುಬಂದಿಲ್ಲ ಎಂದು ತಿಳಿಸಿದರು. ಜನರು ಆತಂಕದಿಂದ ಅನಗತ್ಯವಾಗಿ ಇಂಧನ ಸಂಗ್ರಹಕ್ಕೆ ಮುಂದಾಗುತ್ತಿರುವುದರಿಂದ ಈ ರೀತಿಯ ಗೊಂದಲ ಉಂಟಾಗಿದೆ ಎಂದರು.


ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟಕ್ಕೆ ಅವಕಾಶ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.


ನಗರ ಪೊಲೀಸ್ ಆಯುಕ್ತ ಭೂಷಣ ಗುಲಾಬ್ ರಾವ್ ಭೋರಸೆ ಮಾತನಾಡಿ, ಯಾವುದೇ ಬಂಕ್‌ಗಳಲ್ಲಿ ಬಾಟಲ್ ಅಥವಾ ಕ್ಯಾನ್‌ಗಳಲ್ಲಿ ಇಂಧನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಅಕ್ರಮ ಸಂಗ್ರಹ ಹಾಗೂ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.


ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಶಾಂತವಾಗಿ ಸಹಕರಿಸಬೇಕು. ಯಾವುದೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.


ಪತ್ರಿಕಾಗೋಷ್ಠಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಉಪಸ್ಥಿತರಿದ್ದರು

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತೀಶ ಜಾರಕಿಹೊಳಿ, ಆಪ್ತರ ಮನೆಗಳಲ್ಲಿ ಇಡಿ ಶೋಧ ಅಂತ್ಯಸತೀಶ ಜಾರಕಿಹೊಳಿ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಲಕ್ಷ್ಮಿ ಹೆಬ್ಬಾಳಕರಡಿ.ಕೆ. ಶಿವಕುಮಾರ ತಾಯಿಗೆ ನೋಟಿಸ್ ನೀಡಿಲ್ಲಮತ್ತೆ ಗಾಯಗೊಂಡ ಹರ್ಷಿತ ರಾಣಾ: ಅಫ್ಘಾನಿಸ್ತಾನ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹೊರಕ್ಕೆಎಸ್‌ಐಆರ್‌ ಅಚ್ಚರಿ: ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!14 ವರ್ಷದ ನಿಶುಗೆ ಅತ್ಯಾಚಾರ ಬೆದರಿಕೆ: ತಕ್ಷಣ ರಕ್ಷಣೆಗೆ ಸುಪ್ರೀಂ ಕೋರ್ಟ ಸೂಚನೆ‘ನನ್ನನ್ನು ಪ್ರಚಾರದ ಸಾಧನವಾಗಿ ಬಳಸಲಾಗಿದೆ’: ಭಾರತ ಸರ್ಕಾರದ ವಿರುದ್ಧ ವಿಜಯ ಮಲ್ಯ ಆರೋಪಉಳಿದ ಭರವಸೆಗಳ ಈಡೇರಿಕೆಗೆ ವೇಗ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಎಸ್‌ಐಆರ್ : ಡಿ.ಕೆ. ಶಿವಕುಮಾರ ತಾಯಿ ಸೇರಿ ಹಲವು ಗಣ್ಯರಿಗೆ ನೋಟಿಸ್ಗರ್ಬಾದಲ್ಲಿ ಮುಸ್ಲಿಮರಿಗೆ ನಿಷೇಧ ಸರಿಯಲ್ಲ; ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದೆ: ಅಠಾವಳೆ