LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೇತುವೆ ತಡೆಗೋಡೆಗೆ ಜೀಪ್ ಡಿಕ್ಕಿ; ಮೂವರ ಸಾವು

ಬಾಗಲಕೋಟ : ಬಾಗಲಕೋಟ ನಗರದ ಪ್ರಾರ್ಥನಾ ಸ್ಥಳವೊಂದಕ್ಕೆ ಭೆಟ್ಟಿ ನೀಡಿ ಮರಳಿ ಹೋಗುತ್ತಿದ್ದ ಜೀಪೊಂದು ರಸ್ತೆ ಬದಿಯ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಅಸು ನೀಗಿದ್ದು ನಾಲ್ವರು ಗಾಯಗೊಂಡಿದ್ದಾರೆ.



ಇಳಕಲ್ ಗ್ರಾಮದ ಬಳಿ ಎಂ ಕೆ ದಾಭಾ ಬಳಿ ಈ ದುರ್ಘಟನೆ ಸಂಭವಿಸಿದೆ. ತಾವರಾಗೆರೆಯ ಕುಟುಂಬವೊಂದು ತಮ್ಮ ಹರಕೆ ಈಡೇರಿದ್ದರಿಂದ ಬಾಗಲಕೋಟದ ಪ್ರಾರ್ಥನಾ ಮಂದಿರಕ್ಕೆ ಭೆಟ್ಟಿ ನೀಡಿ ಹರಕೆ ಸಲ್ಲಿಸಿ ಮರಳಿ ಊರಿಗೆ ತೆರಳಿದ್ದಾಗ ಅವರು ಪ್ರಯಾಣಿಸುತ್ತಿದ್ದ ಜೀಪ್ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.



ಅಪಘಾತದಲ್ಲಿ ಶಮೀದಸಾಬ ನಾಯಕ, ಮೌಲಾಸಾಬ ನಾಯಕ ಮತ್ತು ಇಮಾಮಬಿ ನಾಯಕ ಸಾವಿಗೀಡಾದರು. ಒಬ್ಬರು ಸ್ಥಳದಲ್ಲೇ ಮಡಿದರೆ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಅಸುನೀಗಿದರೆಂದು ಪೊಲೀಸರು ತಿಳಿಸಿದ್ದಾರೆ.



ಗಾಯಗೊಂಡಿರುವ ನಾಲ್ವರನ್ನು ಬಾಗಲಕೋಟ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹವಳದ ದಿಬ್ಬಗಳ ನಡುವೆ ರಾಹುಲ್ ಸಾಹಸರೂಪಾಯಿ 100 ತಲುಪಿದರೂ ಆತಂಕ ಬೇಡ ಎಂದ ಮೋದಿಯ ಆರ್ಥಿಕ ಸಲಹೆಗಾರ್ತಿ : ವ್ಯಾಪಕ ಟೀಕೆಅಮೂಲ್ಯ ಪರಿಸರ ಸಂಪತ್ತಿಗೆ ಬೆದರಿಕೆ ಒಡ್ಡಿದ ಯೋಜನೆ ಗ್ರೇಟ್ ನಿಕೋಬಾರ್ ಯೋಜನೆಭಿನ್ನಾಭಿಪ್ರಾಯ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂಖಾತೆ ಹಂಚಿಕೆ ಕಿಡಿ: ಮುನಿಯಪ್ಪ ಅಸಮಾಧಾನ, ಖಾತೆ ವಹಿಸಿಕೊಳ್ಳಲು ನಿರಾಕರಣೆಗುಂಡಿನ ದಾಳಿಗೆ ನಲುಗಿದ ಮಣಿಪುರ : ಮೂವರು ನಾಗರಿಕರ ಹತ್ಯೆ, 7 ಮನೆಗಳಿಗೆ ಬೆಂಕಿ ರೆಪೊ ದರದಲ್ಲಿ ಬದಲಾವಣೆ ಇಲ್ಲಖಾತೆ ಹಂಚಿಕೆ ಬಗ್ಗೆ ಅಸಮಾಧಾನ; ಸಚಿವ ಸ್ಥಾನ ತೊರೆದ ರಾಮಲಿಂಗಾ ರೆಡ್ಡಿಖಾತೆಗಳ ಹಂಚಿಕೆ ಕಸರತ್ತು ಪೂರ್ಣ, ಯಾರಿಗೆ ಯಾವ ಖಾತೆ? ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ