LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಭಾರಿ ಮಳೆಗೆ ಗೋವಾ ಹೋಗುವ ಮೂರು ರಸ್ತೆಗಳು ಬಂದ್!

ಬೆಳಗಾವಿ, ೨೫: ಕಳೆದ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಗೋವಾ ಸಂಪರ್ಕ ಕಲ್ಪಿಸುವ ಇನ್ನೆರಡು ರಸ್ತೆಗಳು ಪ್ರವಾಹದ ಕಾರಣ ಸ್ಥಗಿತ ಆಗಿವೆ.



ಹಲತ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಖಾನಾಪುರ-ಜಾಂಬೋಟಿ-ಗೋವಾ ಹೆದ್ದಾರಿಯನ್ನು ಸಹ ಮುಚ್ಚಲಾಗಿದೆ.



ಅಲ್ಲದೇ ಖಾನಾಪುರ-ಹೆಮ್ಮಡಗಾ-ಅನಮೋಡ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭೀಮಗಡ ಸಮೀಪದ ಮಂತುರ್ಗಾ ಬಳಿಯ ಹತಲತ್ರಿ ನದಿ ಮೇಲಿನ ಸೇತುವೆ ಮೇಲೆ 5 ಅಡಿ ನೀರು ಹರಿಯುತ್ತಿರುವುದರಿಂದ ಅಲ್ಲಿ ಸಂಚಾರ ಸ್ಥಗಿತವಾಗಿದೆ.



ಈಗಾಗಲೇ ಬೆಳಗಾವಿ-ಜಾಂಬೋಟಿ ರಸ್ತೆಯ ಕುಸಮಳ್ಳಿ ಸೇತುವೆಯ ಕುಸಿತದಿಂದ ರಸ್ತೆ ಬಂದ್‌ ಆಗಿದ್ದರಿಂದ ಗೋವಾ ಹೋಗಲು ಖಾನಾಪುರ-ಜಾಂಬೋಟಿ ಮೂಲಕ ವಾಹನಗಳು ಸಂಚರಿಸುತ್ತಿದ್ದವು. ಈಗ ಆ ರಸ್ತೆಯ ಸಂಚಾರ ಸಹ ಸಂಪೂರ್ಣವಾಗಿ ಬಂದಾಗಿದೆ.







ಹಬ್ಬಾನಟ್ಟಿಯ ಐತಿಹಾಸಿಕ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.



Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ