LIVE TV LocalCrimeNationalInternationalPoliticsFinancialEducationTechnologyEntertainmentSportsHealthFeatureTravelingBeautyRecipes
State News

ನನ್ನನ್ನೇ ಟ್ರ್ಯಾಪ್ ಮಾಡಲು ಯತ್ನಿಸಿದ್ದರು : ಡಿಕೆಶಿ

ಸ್ಟಿಂಗ್ ಆಪರೇಷನ್‌ಗೆ ಹಣ ನೀಡಿದವರ ಮಾಹಿತಿಯೂ ಇದೆ; ಅಗತ್ಯಬಿದ್ದರೆ ಸಾಕ್ಷ್ಯ ಬಿಡುಗಡೆ ಮಾಡುವೆ ಎಂದು ಮುಖ್ಯಮಂತ್ರಿ ಎಚ್ಚರಿಕೆ

ಹೊಸದಿಲ್ಲಿ, ಅ. 8: ಮುಖ್ಯಮಂತ್ರಿ ಹುದ್ದೆಗೆ ಬಂದ ಬಳಿಕ ತಮ್ಮ ವಿರುದ್ಧವೇ ಸ್ಟಿಂಗ್ ಆಪರೇಷನ್ ನಡೆಸಿ ಬಲೆಗೆ ಬೀಳಿಸಲು ಕೆಲವರು ಪ್ರಯತ್ನಿಸಿದ್ದರು. ಈ ಸಂಚಿನ ಹಿಂದೆ ಯಾರಿದ್ದಾರೆ, ಯಾರು ಹಣಕಾಸು ಒದಗಿಸುತ್ತಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳು ತಮ್ಮ ಬಳಿಯಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಿಎಸ್‌ಟಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ನೆಪದಲ್ಲಿ ಕೆಲವರು ನನ್ನ ಬಳಿಗೆ ಬಂದಿದ್ದರು. ಅವರ ಉದ್ದೇಶದ ಬಗ್ಗೆ ಅನುಮಾನ ಬಂದಿದ್ದರಿಂದ ಪೊಲೀಸರ ಮೂಲಕ ಮಾಹಿತಿ ಸಂಗ್ರಹಿಸಿದ್ದೇನೆ. ಸಂಚಿನ ಸೂತ್ರಧಾರರು ಹಾಗೂ ಹಣಕಾಸು ನೆರವು ನೀಡುತ್ತಿರುವವರ ವಿವರಗಳು, ಛಾಯಾಚಿತ್ರಗಳು ನನ್ನ ಬಳಿಯಿವೆ. ಅಗತ್ಯಬಿದ್ದರೆ ಬಿಡುಗಡೆ ಮಾಡುತ್ತೇನೆ’ ಎಂದರು.

‘ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದೇನೆ. ಸುಮ್ಮನೆ ಆರೋಪ ಮಾಡುವುದಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಕೆಲವರು ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

2000ರ ಆಸುಪಾಸಿನಲ್ಲಿಯೂ ತಮ್ಮ ವಿರುದ್ಧ ಇಂತಹ ಪ್ರಯತ್ನಗಳು ನಡೆದಿದ್ದವು. ಹೀಗಾಗಿ ಸಚಿವರು ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಸಂಚಿನಲ್ಲಿ ಕರ್ನಾಟಕದವರೇ ಭಾಗಿಯಾಗಿದ್ದಾರೆಯೇ ಅಥವಾ ಹೊರರಾಜ್ಯದವರ ಕೈವಾಡವಿದೆಯೇ ಎಂಬುದನ್ನು ಈಗಲೇ ಬಹಿರಂಗಪಡಿಸುವುದಿಲ್ಲ. ಕಾಲವೇ ಉತ್ತರ ನೀಡಲಿದೆ ಎಂದರು.

ಫಾರ್ಮ್‌–7 ದುರ್ಬಳಕೆ: ವರಿಷ್ಠರಿಗೆ ದಾಖಲೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಫಾರ್ಮ್‌–7 ದುರ್ಬಳಕೆಯಾಗಿದೆ ಎಂದು ಆರೋಪಿಸಿದ ಶಿವಕುಮಾರ, ಸಂಬಂಧಿಸಿದ ದಾಖಲೆಗಳನ್ನು ದೆಹಲಿಗೆ ತಂದಿದ್ದು, ಕಾಂಗ್ರೆಸ್ ವರಿಷ್ಠರಿಗೆ ಸಲ್ಲಿಸುವುದಾಗಿ ತಿಳಿಸಿದರು.

‘ಫಾರ್ಮ್‌–7 ದುರ್ಬಳಕೆ ಕುರಿತು ಪ್ರಕರಣ ದಾಖಲಿಸುವುದನ್ನು ಬಿಜೆಪಿ ನಾಯಕರು ಪ್ರಶ್ನಿಸುತ್ತಿದ್ದಾರೆ. ಆದರೆ, ತನಿಖೆ ನಡೆಯಲಿದೆ. ರಾಜ್ಯಪಾಲರನ್ನು ಭೇಟಿಯಾದ ಕೆಲವು ನಾಯಕರೇ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಹೆಸರು ಬಹಿರಂಗವಾಗುತ್ತದೆ ಎಂಬ ಆತಂಕದಿಂದ ತನಿಖೆಗೆ ವಿರೋಧಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರ ಕ್ರಮವನ್ನು ಅಮಾನವೀಯ ಎಂದು ಖಂಡಿಸಿದ ಅವರು, ಜಿಎಸ್‌ಟಿ ಸಭೆಯಲ್ಲಿ ರಾಜ್ಯದ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.

ಡಿಕೆಶಿಗೆ ವಿಜಯೇಂದ್ರ ತಿರುಗೇಟು

ಮುಖ್ಯಮಂತ್ರಿಯ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ‘ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಯಾರು ಸ್ಟಿಂಗ್ ಆಪರೇಷನ್ ನಡೆಸಿದ್ದರು ಎಂಬುದು ಜನರಿಗೆ ಗೊತ್ತಿದೆ. ತಮ್ಮದೇ ಶಾಸಕರ ಮೇಲೆ ಯಾರು ಸ್ಟಿಂಗ್ ನಡೆಸುತ್ತಾರೆ, ಡಿಂಗ್ ಡಿಂಗ್ ಆಪರೇಷನ್ ಯಾರು ಮಾಡಿದ್ದಾರೆ ಎಂಬುದೂ ತಿಳಿದಿದೆ’ ಎಂದು ವ್ಯಂಗ್ಯವಾಡಿದರು.

ಆದರೆ, ಸ್ಟಿಂಗ್ ಆಪರೇಷನ್ ಸಂಚಿನ ಕುರಿತು ಮುಖ್ಯಮಂತ್ರಿ ಆರೋಪ ಮಾಡಿದ್ದರೂ, ಸಂಬಂಧಿಸಿದ ವ್ಯಕ್ತಿಗಳ ಹೆಸರು ಅಥವಾ ಸಾಕ್ಷ್ಯಾಧಾರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯೋತ್ಸವಕ್ಕೆ ಮೇಯರ್, ಉಪಮೇಯರ್ ಆಹ್ವಾನಿಸದಂತೆ ಆಗ್ರಹಮತದಾರರು ಸತ್ತಿದ್ದಾರೆಂದು ಶಾಸಕರ ಲೆಟರ್‌ಹೆಡ್‌ನಲ್ಲಿ ಅರ್ಜಿ: ಯತ್ನಾಳ ಸೇರಿ ಮೂವರ ವಿರುದ್ಧ ಎಫ್‌ಐಆರ್ಸೆನ್ಸೆಕ್ಸ್ 1,045 ಅಂಕ, ನಿಫ್ಟಿ 371 ಅಂಕ ಕುಸಿತ; ಒಂದೇ ದಿನ ₹10 ಲಕ್ಷ ಕೋಟಿ ನಷ್ಟ!ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ: ಅಭಿಜೀತ ದೀಪ್ಕೆಮತಗಳ ಕಳ್ಳತನಕ್ಕೆ ಮೂರು ಸಾಕ್ಷ್ಯಗಳಿವೆ, ಮೋದಿ, ಶಾ ಉತ್ತರಿಸಲಿ: ಧ್ರುವ ರಾಠಿಗ್ಯಾನೇಶ ಕುಮಾರ ಹೋದರೆ ಮತ್ತೊಬ್ಬ ಅಜ್ಞಾನೇಶ ಬರುತ್ತಾನೆ, ಎಸ್‌ಐಆರ್‌ ರದ್ದಾಗಲಿ: ಪ್ರಕಾಶ ರಾಜ್ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವಜೇನುನೊಣಗಳ ದಾಳಿಗೆ ಬೆಳಗುಂದಿ ರೈತ ಬಲಿಧಾರವಾಡ ಕರಿಯಮ್ಮ ದೇವಸ್ಥಾನದಲ್ಲಿ ಅ. ೧೧ರಿಂದ ನವರಾತ್ರಿ ಉತ್ಸವಸುಳ್ಳು ಆರೋಪಗಳ ವಿರುದ್ಧ ಕಾನೂನು ಸಮರ: ಸತೀಶ ಜಾರಕಿಹೊಳಿ