LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ; 4 ಸಾವು

ಬೀದರ, 28 : ಮಹಾರಾಷ್ಟ್ರ ಮೂಲದ ಗುತ್ತಿಗೆ ಕಾರ್ಮಿಕರನ್ನು ಆಂಧ್ರ ಪ್ರದೇಶಕ್ಕೆ ಸಾಗಿಸುತ್ತಿದ್ದ ರಿಕ್ಷಾ ಮಾದರಿಯ ಟಾಟಾ ಎಸ್ ವಾಹನಕ್ಕೆ ಕಬ್ಬು ಸಾಗಿಸುತ್ತಿದ್ದ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ, ಐದು ಜನ ಗಾಯಗೊಂಡ ಘಟನೆ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.



ಗಾಯಗೊಂಡವರನ್ನು ಬೀದರ್ ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.



ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರನಿಂದ ಹೈದ್ರಾಬಾದ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗೀರ ದಾವಲಸಾಬ (36) ರಸೀದಾ ಶೇಖ (41) ಟಾಟಾ ಎಸಿ ಚಾಲಕ ವಲಿ (31) ಇಮಾಮ ಶೇಖ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಠಿಚಾರ್ಜ ವಿಡಿಯೋ ನೋಡಲು ಸಮಯವಿಲ್ಲ : ಸುಪ್ರೀಮ ಕೋರ್ಟರೈತ ಹುತಾತ್ಮರ ದಿನಾಚರಣೆಯಲ್ಲಿ ಕಳಸಾ–ಬಂಡೂರಿ ಯೋಜನೆಗೆ ವೇಗ ನೀಡುವಂತೆ ಆಗ್ರಹವಾಟ್ಸಪ್ ಮದುವೆ ಆಹ್ವಾನದ ಎಪಿಕೆ ಫೈಲ್ ಕ್ಲಿಕ್ ಮಾಡಿ ₹10 ಲಕ್ಷ ಕಳೆದುಕೊಂಡ ಅಧಿಕಾರಿಮುಖ್ಯಮಂತ್ರಿ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್ಒಗೆ ಶೋಕಾಸ್ ನೋಟಿಸ್ಗಡಿ ಕನ್ನಡ ಶಾಲೆಗಳ ದುಸ್ಥಿತಿಗೆ ತುರ್ತು ಸ್ಪಂದನೆ ಅಗತ್ಯ: ಸಮಿತಿ ಶಿಫಾರಸುಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಧರಣಿ: ರಾಹುಲ್ ಸೇರಿ ವಿಪಕ್ಷ ನಾಯಕರು ಪೊಲೀಸ ವಶಕ್ಕೆಪ್ರತಿಭಟನಾಕಾರರಿಗೆ ಎಎಪಿ ನೆರವು: ಕಾನೂನು, ವೈದ್ಯಕೀಯ ಸಹಾಯಕ್ಕೆ ಸಹಾಯವಾಣಿ ಆರಂಭ112ಗೆ ಕರೆ ಬಂದರೆ ಠಾಣೆ ವ್ಯಾಪ್ತಿಯ ನೆಪ ಬೇಡವಿದ್ಯಾರ್ಥಿಗಳ ಥಳಿತ ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ ಶಾ ಕ್ಷಮೆಯಾಚಿಸಲಿಮೇದಾಂತ ಆಸ್ಪತ್ರೆಗೆ ಸೋನಮ್ ವಾಂಗ್ಚುಕ ಸ್ಥಳಾಂತರಕ್ಕೆ ಹೈಕೋರ್ಟ ಅನುಮತಿ