ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸ್ತೆಯಲ್ಲಿ ಕೇಬಲ್ ವೈರ್ ಹರಿದು ಬಿದ್ದು ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರ ಸ್ಥಳದಲ್ಲೇ ಮೃತ್ಯು 

ಹುಬ್ಬಳ್ಳಿ : ರಸ್ತೆಯಲ್ಲಿ ಕೇಬಲ್ ವೈರ್ ಹರಿದು ಬಿದ್ದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ (25) ಮತ್ತು ಮೋಹಿದ (27) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.