ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

1120 ದೈಹಿಕ ಶಿಕ್ಷಕರ ಶೀಘ್ರ ನೇಮಕಾತಿ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.

ಈ ಕುರಿತು ವಿಧಾನ ಪರಿಷತ್‍ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಉಳಿದಂತೆ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣದಡಿ ಹತ್ತು ಸಾವಿರಕ್ಕೂ ಹೆಚ್ಚು ಶಿಕ್ಷಕರು ಮತ್ತು ಚಿತ್ರಕಲೆಯಲ್ಲಿ 2800ಕ್ಕೂ ಹೆಚ್ಚು ಶಿಕ್ಷಕರೂ ಕೆಲಸ ನಿರ್ವಹಿಸುತ್ತಿದ್ದಾರೆ. ಖಾಲಿ ಇರುವ ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾವನೆಯನ್ನೇ ಕಳುಹಿಸಲಿಲ್ಲ. 171 ಹುದ್ದೆಗಳ ಪ್ರಸ್ತಾವನೆಯಲ್ಲಿ ಸರಿಯಾದ ದಾಖಲೆಗಳಿಲ್ಲದೆ ನೆನೆಗುದಿಗೆ ಬಿದ್ದಿವೆ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.