LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಧೀಮಂತರ ತತ್ವಾದರ್ಶ ಅಳವಡಿಸಿಕೊಂಡರೆ ಮಾತ್ರ ಉತ್ಸವಗಳು ಅರ್ಥಪೂರ್ಣ : ಸತೀಶ ಜಾರಕಿಹೊಳಿ

ಬೆಳಗಾವಿ, ಅ.23 : ವರ್ಷದಲ್ಲಿ ಒಂದಿಷ್ಟು ಸಮಯವನ್ನು ಮೀಸಲಿಟ್ಟು ಕಿತ್ತೂರು ರಾಣಿ ಚನ್ನಮ್ಮಳ ಹೋರಾಟ, ಬಾಬಾಸಾಹೇಬ ಅಂಬೇಡ್ಕರವರು ಬರೆದ ಸಂವಿಧಾನ, ಬಸವಣ್ಣವರ ಸಮಾನತೆ, ಬುದ್ಧನ ತತ್ವ, ಶಾಹು ಮಹಾರಾಜರ ಶಿಕ್ಷಣ ಕ್ರಾಂತಿ ಇವುಗಳನ್ನು ತಿಳಿದುಕೊಂಡರೆ ದೇಶದ ಅಭಿವೃದ್ದಿ ಜೊತೆಗೆ ನಮ್ಮ ವೈಯಕ್ತಿಕ ಬದುಕನ್ನು ಸಹ ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮನ ಹುಟ್ಟೂರು ಕಾಕತಿಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಿತ್ತೂರ ರಾಣಿ ಚನ್ನಮ್ಮ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.



ವೀರಜ್ಯೋತಿಯು ರಾಜ್ಯದಾದ್ಯಂತ ಸಂಚರಿಸುವ ಮೂಲಕ ಕಿತ್ತೂರಿನ ಐತಿಹಾಸಿಕ ಘಟನೆ, ಪರಂಪರೆ, ಸ್ವಾತಂತ್ರ್ಯ ಹೋರಾಟ, ತತ್ವಾದರ್ಶ, ಇತಿಹಾಸ ಚರಿತ್ರೆ ಇವುಗಳನ್ನು ಎಲ್ಲೆಡೆ ಸಾರಿದಂತಾಗಿದೆ. ಸಮಾಜಕ್ಕೆ ಉತ್ಸವಗಳ ಅವಶ್ಯಕತೆ ಇದೆ. ದಸರಾ ಉತ್ಸವ, ಕಿತ್ತೂರು ಉತ್ಸವ, ರನ್ನ ಉತ್ಸವ ಸೇರಿದಂತೆ ವಿವಿಧ ಉತ್ಸವಗಳ ಆಚರಣೆ ಜೊತೆಗೆ ಅವುಗಳ ಇತಿಹಾಸ ತಿಳಿದುಕೊಂಡು ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ಉತ್ಸವಗಳು ಅರ್ಥಪೂರ್ಣವಾಗುವುದು ಎಂದು ಅವರು ಹೇಳಿದರು.



ಕಾಕತಿ ಅಭಿವೃದ್ಧಿ ಭರವಸೆ



ಕಿತ್ತೂರು ಪ್ರಾಧಿಕಾರದಿಂದ ಬಂದ ಅನುದಾನದಿಂದ ಕಾಕತಿಯಲ್ಲಿ ಕೆಲವು ಕಾಮಗಾರಿಗಳು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಮಾಡುತ್ತೇವೆ ಎಂದು ಸತೀಶ ಭರವಸೆ ನೀಡಿದರು.



ಕಾಕತಿ ಕೋಟೆ ಅರಣ್ಯ ಇಲಾಖೆ ಅಧೀನದಲ್ಲಿದ್ದು, ವೀರರಾಣಿ ಚನ್ನಮ್ಮನ ಜನ್ಮಸ್ಥಳ ಖಾಸಗಿ ಒಡೆತನದಲ್ಲಿದೆ. ಈ ಎರಡು ಸಮಸ್ಯೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಆದರೆ ಇದೀಗ ಜಿಲ್ಲಾಡಳಿತದಿಂದ ಭೂಸ್ವಾಧೀನ ಮಾಡಿ ವಶಕ್ಕೆ ಪಡೆದು ಆದಷ್ಟು ಬೇಗ ಅಭಿವೃದ್ಧಿಗೊಳಿಸಲಾಗುವುದು ಎಂದು ಜಾರಕಿಹೊಳಿ ಹೇಳಿದರು.



ಸರ್ಕಾರ ಕೊಟ್ಟ ಕಡಿಮೆ ಅನುದಾನದಲ್ಲಿ ಜಿಲ್ಲಾಡಳಿತ ಅಚ್ಚುಕಟ್ಟಾಗಿ ಉತ್ಸವ ನಡೆಸುತ್ತದೆ. ಆದರೆ ಇದಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಕೊಟ್ಟು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲು ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.



ಬೆಳಗಾವಿ ಆರ್.ಪಿ.ಡಿ. ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಚ್. ಬಿ. ಕೋಲಕಾರ ಅವರು ಈ  ವಿಶೇಷ ಉಪನ್ಯಾಸ ನೀಡಿದರು. ಇಡೀ ನಾಡಿಗೆ ಅದಮ್ಯ ಚೇತನ, ಪ್ರತಿಭೆ, ಜನಶಕ್ತಿ ವೀರ ರಾಣಿ ಕಿತ್ತೂರು ಚನ್ನಮ್ಮ. ಬೆಳಗಾವಿ ಜಿಲ್ಲೆಯಲ್ಲಿ ದೇಶಿಯ ಆಳ್ವಿಕೆಯನ್ನು ಜನ ಬದುಕಿನ ಹಿತ, ಜನಮುಖಿ ಕಾಳಜಿ ಇವುಗಳನ್ನು ಪ್ರಧಾನವಾಗಿಟ್ಟುಕೊಂಡು ಆಡಳಿತ ನಡೆಸಿ

ಇತಿಹಾಸದಲ್ಲಿ ಅಜರಾಮರಳಾದಂತಹ ಕೀರ್ತಿ ವೀರರಾಣಿ ಚೆನ್ನಮ್ಮಳಿಗೆ ಸಲ್ಲುತ್ತದೆ ಎಂದರು.



ಬ್ರಿಟಿಷ ಕಂಪನಿ ಆಳ್ವಿಕೆ ಪ್ರಾಬಲ್ಯ ಬಲಿಷ್ಠ, ವಾಗಿರುವುದರಿಂದ ನಿರಂತರ ದಾಳಿಗೊಳಗಾದ ಸಂದರ್ಭದಲ್ಲಿ ಚನ್ನಮ್ಮ ತನ್ನ ಬಲ ಹೆಚ್ಚಿಸಿಕೊಳ್ಳಲು ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ, ಬಿಚ್ಚುಗತ್ತಿ ಚೆನ್ನಬಸಪ್ಪರನ್ನು ಇವುರುಗಳನ್ನು ಅಂಗರಕ್ಷಕ ಪಡೆಯಲ್ಲಿ ಸೇರಿಸಿಕೊಂಡು ಹೋರಾಡಿದ ವೀರ ಮಹಿಳೆ ಎಂದು ಹೇಳಿದರು.



ಭಾರತದ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಎಂಬ ಮೊಟ್ಟ ಮೊದಲ ಕಾದಂಬರಿ, ಕಿತ್ತೂರು ಸಂಸ್ಥಾನ ಸಂದೇಶ ಸಾರುವ ಕನ್ನಡ ನೆಲದ ಮಹಾ ಸೌಭಾಗ್ಯ ವೀರರಾಣಿ ಕಿತ್ತೂರು ಚನ್ನಮ್ಮ ಎಂಬ ಗ್ರಂಥಗಳು ರಚನೆಯಾಗಿವೆ ಇವುಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಸಚಿವರು ನುಡಿದರು.



ವಿದ್ವಾಂಸರಾದ ಕ.ಸ ಹಾಲಪ್ಪನವರು ವೀರರಾಣಿ ಕಿತ್ತೂರು ಚೆನ್ನಮ್ಮಳ ಆಡಳಿತ ವೈಖರ್ಯ ಮೆಚ್ಚಿ ಭಾರತದ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಎಂದು ಹೇಳಿದರು.



ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಫ (ರಾಜು) ಸೇಠ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಕಾಕತಿ ಶಿವಪೂಜೆ ಮಠದ ಸ್ವಾಮೀಜಿಗಳಾದ ರಾಚಯ್ಯ ಮಹಾಸ್ವಾಮಿಗಳು, ಕಾಕತಿ ಶಿವಪೂಜೆಮಠದ ಸ್ವಾಮೀಜಿಗಳಾದ ಉದಯ ಸ್ವಾಮೀಜಿ, ಕಾಕತಿ ಗ್ರಾಮ ಪಂಚಾಯತ ಅಧ್ಯಕ್ಷರಾದ ವರ್ಷಾ ಮುಚ್ಚಂಡಿಕರ, ಕಾಕತಿ ಗ್ರಾಮ ಪಂಚಾಯತ ಉಪಾ ಅಧ್ಯಕ್ಷರಾದ ರೇಣುಕಾ ಕೊಳಿಕರ, ಕಾಕತಿ ಉತ್ಸವ ಸಮಿತಿ ಅಧ್ಯಕ್ಷರು ಹಾಗೂ ಬೆಳಗಾವಿ ಉಪವಿಭಾಗಾಧಿಗಳಾದ ಶ್ರವಣ ನಾಯ್ಕ, ತಹಶೀಲ್ದಾರ ಬಸವರಾಜ‌ ನಾಗರಾಳ, ಕಾಕತಿ ಜಿಲ್ಲಾ ಪಂಚಾಯತ ಸದಸ್ಯರಾದ ಸಿದ್ದನಗೌಡ ಸುಣಗಾರ, ಯಲ್ಲಪ್ಪ ಕೋಳಿಕರ, ಕಾಕತಿ ಗ್ರಾಮ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿ ಮತ್ತೊಂದು ನೂರಾರು ಕೋಟಿ ರೂ. ವಂಚನೆ ಪ್ರಕರಣ!ಬೆಳಗಾವಿಯಲ್ಲಿ ಗುಂಡಿನ ದಾಳಿ: ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚನೆಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಉಮಾ ಶಂಕರಿಸೋನಮ್ ವಾಂಗಚುಕ್ ಆರೋಗ್ಯ ಗಂಭೀರ; ಬಲವಂತವಾಗಿ ಆಹಾರ ನೀಡುವಂತೆ ದೆಹಲಿ ಹೈಕೋರ್ಟನಲ್ಲಿ ಅರ್ಜಿಇ.ಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣ ತೊರೆದ ಮದನ್ ಮಿತ್ರಾಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತೀಯ ಮೂಲದ ಅನಿಲ ಮೆನನ್ಅಮೆರಿಕ ದಿಗ್ಬಂಧನಕ್ಕೆ ಇರಾನ್ ತಿರುಗೇಟು; ತೈಲ ರಫ್ತು ಸ್ಥಗಿತದ ಎಚ್ಚರಿಕೆಧರ್ಮಸ್ಥಳ ಪ್ರಕರಣ: 7,000 ಪುಟಗಳ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ'ಸ್ತನ ಹಿಡಿದರೆ ಅತ್ಯಾಚಾರ ಯತ್ನವಲ್ಲ' ಎಂದ ಹೈಕೋರ್ಟ: ಸುಪ್ರೀಮ ಕೋರ್ಟ ತರಾಟೆಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ; 30ಕ್ಕೂ ಹೆಚ್ಚು ತಹಶೀಲ್ದಾರಗಳಿಗೆ ಹೊಸ ನಿಯುಕ್ತಿ