ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುಂಬಜ್ ಮಾದರಿಯಲ್ಲಿ ಇರುವ ಬಸ್ ನಿಲ್ದಾಣ ಕೆಡವುತ್ತೇವೆ : ಪ್ರತಾಪ್ ಸಿಂಹ

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಕಾನೂನು ಕೈಗೆತ್ತಿಗೊಳ್ಳುವ ಹೇಳಿಕೆಯನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ನೀಡಿದ್ದಾರೆ.

ಜಾಲತಾಣದಲ್ಲಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ನಿನ್ನೆ ‘ಟಿಪ್ಪು ನಿಜ ಕನಸುಗಳು’ ನಾಟಕದ ವೇಳೆ ಪ್ರತಾಪ ಸಿಂಹ ಭಾಷಣ ಮಾಡಿದ್ದರು. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನು ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣಗಳ ತೆರವಿಗೆ ಹೇಳಿದ್ದೇನೆ. ಮೂರ್ನಾಲ್ಕು ದಿನದಲ್ಲಿ ಗುಂಬಜ್ ತೆರವುಗೊಳಿಸಲು ಇಂಜಿನಿಯರ್ ಗಳಿಗೆ ಸೂಚನೆ ನೀಡಿದ್ದೇನೆ. ಇಲ್ಲವಾದರೆ ನಾವೇ ಜೆಸಿಬಿ ತಂದು ಗುಂಬಜ್ ತೆರವು ಮಾಡುತ್ತೇವೆ  ಎಂದು ಮೈಸೂರು ಸಂಸದ ಪ್ರತಾಪ ಸಿಂಹ ನೀಡಿದ ಹೇಳಿಕೆ ಜಾಲತಾಣದಲ್ಲಿ ವೈರಲ್ ಆಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.