LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? : ಸಿ.ಟಿ. ರವಿ

ಚಿಕ್ಕಮಗಳೂರು, ಜುಲೈ 24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಮಾಡಿದ ದ್ವೇಷ ಭಾಷಣ ವಿವಾದಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, "ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ?" ಎಂದು ಹೇಳಿದ್ದು, ಈ ಹೇಳಿಕೆಗೆ ಜಾಲತಾಣಗಳಲ್ಲಿ ವ್ಯಾಪಕ ಟೀಕೆ, ಆಕ್ಷೇಪ ವ್ಯಕ್ತವಾಗಿದೆ.

ನೀಟ್ ಅಕ್ರಮ ವಿರೋಧಿಸಿ ನಡೆಯುತ್ತಿರುವ ಹೋರಾಟವು ಶಿಕ್ಷಣ ಸುಧಾರಣೆಗಾಗಿ ಅಲ್ಲ ಎಂದು ಆರೋಪಿಸಿದ ಅವರು, "ಧರ್ಮೇಂದ್ರ ಪ್ರಧಾನ ಹಠಾವೋ, ಮೋದಿ ರಾಜೀನಾಮೆ ನೀಡಬೇಕು ಎಂದು ತುಕ್ಡೆ ಗ್ಯಾಂಗ್‌ಗಳು ಮಾತನಾಡುತ್ತಿವೆ. ಅವರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿಗಿಂತ ರಾಜಕೀಯ ಉದ್ದೇಶವೇ ಹೆಚ್ಚಾಗಿದೆ" ಎಂದು ಹೇಳಿದರು.

ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕಾಂಗ್ರೆಸ್ ಬೆಂಬಲಿತ ಪ್ರತಿಭಟನೆಗಳು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ನಡೆಯುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಿಕೊಂಡು ವಿದ್ಯಾರ್ಥಿಗಳ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ನೀಟ್ ಅಕ್ರಮವನ್ನು ನೆಪವಾಗಿಸಿಕೊಂಡು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ರೂಪಿಸಲಾಗಿದ್ದು, ವಿದ್ಯಾರ್ಥಿಗಳ ಮೂಲಕ ದಂಗೆ ಎಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಿ.ಟಿ. ರವಿ ಹೇಳಿದರು.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಟ್ ಅಕ್ರಮ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ; ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಮೆಲೋನಿ ಇನ್‌ಸ್ಟಾಗ್ರಾಂನಲ್ಲಿ ಮೋದಿ ರಾಜೀನಾಮೆಗೆ ಒತ್ತಾಯ; ವಿದ್ಯಾರ್ಥಿಗಳ ಅಭಿಯಾನ ವೈರಲ್ ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ? : ಸಿ.ಟಿ. ರವಿಭೂಕುಸಿತದಿಂದ ಟಾಟಾ ಸುಮೋ ಮೇಲೆ ಬಿದ್ದ ಬಂಡೆ: 6 ತಿಂಗಳ ಮಗು ಸೇರಿ 13 ಮಂದಿ ದುರ್ಮರಣದೆಹಲಿ ಪ್ರತಿಭಟನೆ ಹಿಂದೆ ವಿದೇಶಿ ಶಕ್ತಿಗಳ ಕೈವಾಡ: ಆರ್‌ಎಸ್‌ಎಸ್‌ಭ್ರಷ್ಟ ಸಚಿವ ಪ್ರಧಾನ್ ರಾಜೀನಾಮೆ ನೀಡುವವರೆಗೆ ಚರ್ಚೆಯಿಲ್ಲ: ರಾಹುಲ್ ಗಾಂಧಿಪ್ರಧಾನ್ ರಾಜೀನಾಮೆ ಕುರಿತು ನಾಳೆ ತೀರ್ಮಾನ; ಎರಡು ಬೇಡಿಕೆಗಳಿಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸಿಜೆಪಿಪೆಲೆಟ್ ಗನ್ ಬಳಕೆ ಆರೋಪ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಪ್ರಶ್ನೆಪತ್ರಿಕೆ ಸೋರಿಕೆಗೆ 10 ವರ್ಷ ಜೈಲು ಶಿಕ್ಷೆ, ₹10 ಕೋಟಿ ವರೆಗೆ ದಂಡ