ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.