ಕೊಪ್ಪಳ : ಬೆಂಗಳೂರು, ಮಂಗಳೂರು ಸೇರಿದಂತೆ ಇಡೀ ದೇಶಾದ್ಯಂತ ಎನ್ಐಎ ಅಧಿಕಾರಿಗಳು ಪಿಎಫ್ಐ ಹಾಗೂ ಎಸ್ ಡಿಪಿಐ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದು ಕೊಪ್ಪಳದಲ್ಲೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ 3 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸದಲ್ಲಿ ಅಬ್ದುಲ್ ಫಯಾಜನನ್ನು ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಗೆ ಕರೆದೊಯ್ದಿದ್ದಾರೆ.