ಮಂಗಳೂರು : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ರಾಜ್ಯದ 35ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.
ಪ್ರವೀಣ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದವಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ ಎನ್ನಲಾಗಿದೆ.
ಈ ಎಲ್ಲಾ ಕಾರಣಗಳಿಂದ ಎನ್ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ನಡೆಸಿದೆ.