Please assign a menu to the primary menu location under menu

Local News

ಯೂಟ್ಯೂಬ್ ನಿಷೇಧ- ಸುಳ್ಳು ಪ್ರಕಟಣೆ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ಪಷ್ಟನೆ


ಬೆಳಗಾವಿ : ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧ ಮಾಡಲಾಗಿದೆ ಎಂಬ “ಮಾಧ್ಯಮ ಪ್ರಕಟಣೆ”ಯೊಂದು ಸಾಮಾಜಿಕ‌ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಪ್ರಕಟಣೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ‌ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಲಾಗಿರುತ್ತದೆ ಎಂಬ ನಕಲಿ ಮಾಧ್ಯಮ ಪ್ರಕಟಣೆಯನ್ನು ಸೃಷ್ಟಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಪ್ ಗ್ರುಪ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ‌ಮೂಡಿಸುತ್ತಿದೆ.

ಈ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವಿನಾಕಾರಣ ಗೊಂದಲ ಮೂಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.


Samadarshi News

Leave a Reply