This is the title of the web page

ಶಾಲೆ, ಕಾಲೇಜು ಬಂದ್ ಇಲ್ಲ

ಬೆಂಗಳೂರು, 29- ರಾಜ್ಯದಲ್ಲಿ ಶಾಲೆ, ಕಾಲೇಜುಗಳನ್ನು ಬಂದ್ ಮಾಡುವ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ ನಾಗೇಶ ಹೇಳಿದ್ದಾರೆ .

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಬಗ್ಗೆ ಅವರು ಪ್ರತಿಕ್ರಿಯೆ ನೀಡಿ, ಸದ್ಯಕ್ಕೆ ಶಾಲಾ -ಕಾಲೇಜು ಬಂದ್ ಮಾಡುವ ನಿರ್ಧಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುವದು. ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದ್ದು ಸದ್ಯ ಶಾಲೆ-ಕಾಲೇಜುಗಳಲ್ಲಿ ಸೋಂಕು ಗಂಭೀರವಾಗಿ ಹರಡಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದರು.

You might also like
Leave a comment