This is the title of the web page

ವೀಕೆಂಡ್ ಕರ್ಫ್ಯೂ ಇಲ್ಲ

ಬೆಂಗಳೂರು, 21- ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು ನಡೆದ ತಜ್ಞರು, ಅಧಿಕಾರಿಗಳು ಹಾಗೂ  ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ಸಚಿವರಾದ ಡಾ.ಕೆ ಸುಧಾಕರ, ಆರಗ ಜ್ಞಾನೇಂದ್ರ, ಆರ್. ಅಶೋಕ, ಗೋವಿಂದ ಕಾರಜೋಳ, ಬಿಸಿ ನಾಗೇಶ, ವಿಶ್ವ ಆರೋಗ್ಯ ಸಂಸ್ಥೆಯ ಓರ್ವ ಪ್ರತಿನಿಧಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ,  ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ ಆದಿ ಉಪಸ್ಥಿತರಿದ್ದರು.

You might also like
Leave a comment