Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

ಮುಖ್ಯಮಂತ್ರಿ ಕಚೇರಿ ಮುಂದೆ ಪ್ರತಿಭಟನೆ; ಕೆಪಿಸಿಸಿ ಮಹಿಳಾ ಅಧ್ಯಕ್ಷೆ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿ  


ಬೆಂಗಳೂರು: ಅನುಮತಿ ಇಲ್ಲದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್​ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ​ ವಿರುದ್ಧ ಜಾಮೀನು ರಹಿತ ವಾರಂಟ್​ ಜಾರಿ ಮಾಡಲಾಗಿದೆ.

ಹೈಗ್ರೌಂಡ್ಸ್​ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ​ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್​ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ​ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್​ ಜಾರಿ ಮಾಡಿ ಆದೇಶಿಸಿದ್ದು, ವಿಚಾರಣೆಯನ್ನು ಡಿಸೆಂಬರ್​ 27ಕ್ಕೆ ಮುಂದೂಡಿದೆ.

2021ರ ಮಾರ್ಚ್ 25ರಂದು ಪುಷ್ಪಾ ಅಮರನಾಥ​ ಸೇರಿದಂತೆ ಇತರ 7 ಮಂದಿ ಮಹಿಳೆಯರು ಅನುಮತಿ ಪಡೆಯದೇ ಮುಖ್ಯಮಂತ್ರಿಗಳ ಗೃಹ ಕಚೇರಿ ಗೇಟ್​ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು.

ಈ ಸಂಬಂಧ ಅಕ್ರಮವಾಗಿ ಗುಂಪು ಕೂಡಿದ್ದರಿಂದ ಗೃಹ ಕಚೇರಿ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು ಎಂದು ಹೈಗ್ರೌಂಡ್ಸ್​ ಠಾಣೆಯ ಸಹಾಯಕ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿದ್ದ ಡಿ.ಬಿ.ಚನ್ನಬಸವಯ್ಯ ದೂರು ದಾಖಲಿಸಿದ್ದರು.


A B Dharwadkar
the authorA B Dharwadkar

Leave a Reply