Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಸಂಪಾದಕರಿಗೆ ನೋಟಿಸ್


ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಲೇಖನ ಬರೆದಿದ್ದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಬಗ್ಗೆ ಟ್ವಿಟರ್ ಪೋಸ್ಟ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಅ. 26 ರಂದು ಮಧ್ಯಾಹ್ನ 12:30ಕ್ಕೆ ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಮುನ್ನ ಮೊಹಮ್ಮದ ಮುಫಾಜ್ ಎಂಬುವರು ಅ. 9 ರಂದು ಟ್ವೀಟ್ ಮಾಡಿ ಕನ್ನಡ ದಿನಪತ್ರಿಕೆ ಸಂಪಾದಕ ರಾಷ್ಟ್ರಪತಿ ಅವರನ್ನು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದ್ದು, ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಪ್ರಕಟವಾದ ಲೇಖನದ ಫೋಟೋಗಳನ್ನು ಹಂಚಿಕೊಂಡಿದ್ದರು. ರಾಷ್ಟ್ರಪತಿ ಭವನದ ಟ್ವಿಟರ್ ಖಾತೆಗೆ ಟ್ವೀಟ್ ಟ್ಯಾಗ್ ಮಾಡಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.


Leave a Reply