ಅಪ್ರಾಪ್ತ ವಿದ್ಯಾರ್ಥಿಗಳು ಬೈಕ್ ಚಲಾಯಿಸಿಕೊಂಡು ಕಾಲೇಜಿಗೆ ಬಂದರೆ ಪ್ರಾಚಾರ್ಯರಿಗೆ ನೋಟಿಸ್

A B Dharwadkar
ಅಪ್ರಾಪ್ತ ವಿದ್ಯಾರ್ಥಿಗಳು ಬೈಕ್ ಚಲಾಯಿಸಿಕೊಂಡು ಕಾಲೇಜಿಗೆ ಬಂದರೆ ಪ್ರಾಚಾರ್ಯರಿಗೆ ನೋಟಿಸ್

ಬೆಂಗಳೂರು : ಅವಫಡಗಳನ್ನು ತಪ್ಪಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಅವುಗಳನ್ನು ಗಾಳಿಗೆ ತೂರಲಾಗುತ್ತದೆ. ಆದರೆ ಇನ್ನು ಮುಂದೆ ಅಂತವರಿಗೆ ಶಿಕ್ಷೆ ನೀಡಲಾಗುತ್ತದೆ. ಅಂದರೆ ಸಂಬಂಧಿಸಿದ ಕಾಲೇಜುಗಳ ಮುಖ್ಯಸ್ಥರಿಗೆ ನೇರವಾಗಿ ದೂರು ಹೋಗುತ್ತದೆ.

18 ವರ್ಷದೊಳಗಿನವರು ಇನ್ನು ಮುಂದೆ ದ್ವಿಚಕ್ರ ವಾಹನ ಓಡಿಸುವಂತಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ.

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ದ್ವಿಚಕ್ರ ವಾಹನ ಚಲಾಯಿಸುವವರು ಹೆಲ್ಮಟ್ ಕಡ್ಡಾಯವಾಗಿ ಧರಿಸಬೇಕು. ಯುವ ಜನತೆ ಬಹಳ ಲಘುವಾಗಿ ಪರಿಗಣಿಸಬಾರದು ಇದರಿಂದ ಆಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರಲ್ಲದೆ, 18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.