ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಕ್ಫ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಅವರು ದೇಶದ ನಾಗರಿಕರಾದ ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು.
ನಂತರ ಈ ಹೇಳಿಕೆ ಕುರಿತು ವಿವಾದ ಸ್ವಾಮೀಜಿ ವಿಷಾದಿಸಿದ್ದರು. ಬಾಯಿ ತಪ್ಪಿ ಆಡಿದ ಮಾತಾಗಿದೆ. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.