ಹುಲಕೋಟಿ : ಸ್ವಯಂ ಸೇವೆ ಸಾರ್ವಕಾಲಿಕ ಮೌಲ್ಯ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೂ ಪರಸ್ಪರ ಅವಲಂಬಿತ ಮತ್ತು ಸಂಬಂಧ ಹೊಂದಿದ್ದು, ಯಾವುದೇ ಫಲಾಪೇಕ್ಷೆ ಬಯಸದೆ ಸ್ವಯಂ ಇಚ್ಛೆಯಿಂದ ಸಮಾಜಮುಖಿ ಸೇವೆಯಲ್ಲಿ ನಿರತರಾದರೆ ಅಹಿಂಸೆ ಮತ್ತು ಪರಿಸರದೊಂದಿಗೆ ಸಾಮರಸ್ಯವನ್ನು ಕಾಯ್ದುಕೊಳ್ಳಲು ಸಾಧ್ಯವೆಂದು ಪ್ರೊ. ಸುಧಾ ಕೌಜಗೇರಿ ಹೇಳಿದರು.
ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕವು ಆಯೋಜಿಸಿದ್ದ ‘ಎನ್.ಎಸ್.ಎಸ್. ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸೇವಾ ಮನೋಭಾವನೆ ಮೈಗೂಡಿಸಿಕೊಂಡರೆ ಕಲಿಕೆ ಅರ್ಥಪೂರ್ಣವಾಗುವುದೆಂದು ಹೇಳಿದರು.
ಎನ್.ಎಸ್.ಎಸ್. ಘಟಕದ ಸಂಯೋಜಕ ಪ್ರೊ. ಅಪ್ಪಣ್ಣ ಹಂಜೆ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜನ್ಮದಿನದ ಸ್ಮರಣೆಯಲ್ಲಿ ಭಾರತ ಸರ್ಕಾರ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಬಹುಮುಖ ವ್ಯಕ್ತಿತ್ವ ವಿಕಸನಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.
ಪ್ರೊ. ಲಕ್ಷ್ಮಣ ಮುಳಗುಂದ ವಿದ್ಯಾರ್ಥಿಗಳು ಸಮುದಾಯ ಸೇವೆಯತ್ತ ಒಲವು ತೋರಿ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಮಹಾಂತೇಶ ಅವರು ಸೇವಾ ಮನೋಭಾವನೆ ಮೈಗೂಡಿಸಿಕೊಂಡ ಮಹನೀಯರೆಲ್ಲರೂ ಜಗತ್ತಿನಾದ್ಯಂತ ಹೆಸರುವಾಸಿಯಾಗಿ ಸಾರ್ವಕಾಲಿಕ ಆದರ್ಶನೀಯರಾಗಿದ್ದು, ‘ಪರಸ್ಪರೋಪಗ್ರಹೋ ಜೀವಾನಂ’ ಜೀವನ ಮೌಲ್ಯವನ್ನು ಮೈಗೂಡಿಸಿಕೊಂಡು ಬದುಕಿದರೆ ಸಾಮರಸ್ಯ, ಭಾವೈಕ್ಯತೆಯ ಸಮಾಜವನ್ನು ಕಟ್ಟಲು ಸಾಧ್ಯವೆಂದು ಹೇಳಿದರು.
ಎನ್.ಎಸ್.ಎಸ್. ಘಟಕದ ಸಹ ಸಂಯೋಜಕ ವಿಜಯಕುಮಾರ ವಂದಿಸಿದರು. ಸ್ವಯಂ ಸೇವಕರು ಕಾರ್ಯಕ್ರಮ ನಡೆಸಿಕೊಟ್ಟರು.

