ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.
ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ವಿಜಯಪುರದ ಬಿಎಲ್ಡಿಇ ನರ್ಸಿಂಗ್ ಕಾಲೇಜನಲ್ಲಿ ಎರಡನೇ ವರ್ಷದ ನರ್ಸಿಂಗ ಕೋರ್ಸ ಓದುತ್ತಿದ್ದಳು. ಮೊದಲನೇ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ.
ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷಿಸಿದಷ್ಟು ಅಂಕಗಳು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಕೀರ್ತನಾ, ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.