This is the title of the web page

ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳಿವರು

ಬೆಂಗಳೂರು, ೧೭- ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ 21 ಸರ್ಕಾರಿ ಅಧಿಕಾರಿಗಳ ಮೇಲೆ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. 21 ಜನರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಎಸಿಬಿ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಳಗಾವಿಯ ಸೂಪರಿಂಟೆಂಡಿಂಗ್‌ ಎಂಜಿನಿಯರ‌ ಭೀಮರಾವ‌ ವೈ. ಪವಾರ‌, ಸಣ್ಣ ನೀರಾವರಿ ಇಲಾಖೆಯ ಉಡುಪಿ ವಿಭಾಗದ ಸಹಾಯಕ ಎಂಜಿನಿಯರ್‌ ಹರೀಶ‌, ಹಾಸನ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಕೃಷ್ಣ ಎಚ್.ವಿ., ಬಾಗಲಕೋಟೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಎನ್‌. ಪಡಸಾಲಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಪ್ಪ ನಾಗಪ್ಪ ಗೋಗಿ, ಗದಗ ಜಿಲ್ಲೆಯಲ್ಲಿನ ಪಂಚಾಯಿತಿ ಕಾರ್ಯದರ್ಶಿ ಪ್ರದೀಪ‌ ಎಸ್.‌ ಆಲೂರು, ಬೆಂಗಳೂರಿನ ಉಪ ಮುಖ್ಯ ವಿದ್ಯುತ್‌ ನಿರೀಕ್ಷಕ ತಿಪ್ಪಣ್ಣ ಪಿ. ಸಿರಸಗಿ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ನಿಯಂತ್ರಕ ಮೃತ್ಯುಂಜ ಚನ್ನಬಸಯ್ಯ ತಿರಣಿ, ಕಾರವಾರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ರಾಜೀವ‌ ಪುರಸಯ್ಯ ನಾಯಕ‌, ಪೊನ್ನಂಪೇಟೆಯ ಜಿಲ್ಲಾ ಪಂಚಾಯತ್‌ ವಿಭಾಗದ ಕಿರಿಯ ಎಂಜಿನಿಯರ್‌ ಬಿ.ಆರ್‌. ಬೋಪಯ್ಯ.

ಬೆಳಗಾವಿಯ ಜಿಲ್ಲಾ ನೋಂದಣಾಧಿಕಾರಿ ಮಧುಸೂದನ, ಸಣ್ಣ ನೀರಾವರಿ ಇಲಾಖೆಯ ಹೂವಿನಹಡಗಲಿ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಪರಮೇಶ್ವರಪ್ಪ, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಂಜುನಾಥ‌ ಜಿ., ಬಿಡಿಎ ಸಿ ದರ್ಜೆ ನೌಕರ ಶಿವಲಿಂಗಯ್ಯ, ಕೊಪ್ಪಳದ ಪೊಲೀಸ್‌ ಇನ್‌ಸ್ಪೆಕ್ಟರ್‌ ಉದಯ ರವಿ, ಕಡೂರು ಪುರಸಭೆಯ ನಿರ್ವಾಹಕ ಬಿ.ಜಿ. ತಿಮ್ಮಯ್ಯ, ರಾಣೆಬೆನ್ನೂರಿನ ನಗರ ಯೋಜನಾ ಕಚೇರಿಯ ಚಂದ್ರಪ್ಪ ಸಿ. ಹೊಳೇಕರ್‌,

ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ನಿವೃತ್ತ ಕುಲಸಚಿವ ಜನಾರ್ದನ, ಜಲ ಸಂಪನ್ಮೂಲ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಮೋಹನಕುಮಾರ‌, ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ‌ ಅವರ ಮನೆ ಹಾಗೂ ಆಸ್ತಿಗಳ ಮೇಲೆ ತನಿಖಾ ಸಂಸ್ಥೆ ದಾಳಿ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಒಟ್ಟು 10 ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದೆ.

You might also like
Leave a comment