ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸೆಪ್ಟಂಬರ್ 21ರಂದು ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಈ ಹಿಂದೆ ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಅವರು ಸಭಾಪತಿಯಾಗಿ ಆಯ್ಕೆಯಾಗಿದ್ದು, ತಮ್ಮ ಅವಧಿ ಪೂರ್ಣಗೊಂಡ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.
ಪಶ್ಚಿಮ 78 ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು ವಿಧಾನ ಪರಿಷತ್ ಸದಸ್ಯರಾಗಿ ಪುನರಾಯ್ಕೆಯಾಗಿದ್ದು, ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಅವರಿಗೆ ಸಭಾಪತಿ ಸ್ಥಾನದ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ. ಹೀಗಾಗಿ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಖಚಿತವಾಗಿದೆ.