ಬೆಳಗಾವಿ : ದೇಶದಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಬೆನ್ನಲ್ಲೇ ಇದನ್ನೇ ಬಂಡವಾಳ ಮಾಡಿಕೊಂಡು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರಿ ಮಾಡಿ, 1 ಕೋಟಿ 30 ಲಕ್ಷ ರೂಪಾಯಿ ಎಗರಿಸಿ ಪರಾರಿಯಾಗಿದ್ದ ಅಂತರ್ರಾಜ್ಯ ಕದೀಮನನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿ ಪಾಸ್ ಮಾಡಿಸಿ, ಎಂಬಿಬಿಎಸ್ ಸೀಟ್ ಕೊಡಿಸುವದಾಗಿ ನಂಬಿಸಿ ಸುಮಾರು 10 ಕ್ಕೂ ಹೆಚ್ಚು ಜನರಿಗೆ ಆತ ಮೋಸ ಮಾಡಿದ್ದಾನೆ. ಅವರಿಂದ ಸುಮಾರು 1,30,41,884 ರೂಪಾಯಿ ಎಗರಿಸಿ ಪರಾರಿಯಾಗಿದ್ದನು. ಇದರ ಜಾಡು ಹೀಡಿದ ಪೊಲೀಸರ ತಂಡ ಆರೋಪಿಯನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಹಚ್ಚಿ ಚಾಲಾಕಿ ವಂಚಕನನ್ನು ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಅರಗೊಂಡ ಅರವಿಂದ ಅಲಿಯಾಸ್ ಅರುಣಕುಮಾರ (43) ಎಂಬವನನ್ನು ಬಂಧಿಸಿರುವ ಪೊಲೀಸರು ಅವನಿಂದ 12 ಲಕ್ಷ 66 ಸಾವಿರ ರೂಪಾಯಿ ಹಣ ಹಾಗೂ ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಕಂಪ್ಯೂಟರ್ ಗಳು ಸೇರಿದಂತೆ 12,66,900 ಬೆಲೆಯ ವಸ್ತುಗಳನ್ನು ಜಫ್ತು ಮಾಡಿದ್ದಾರೆ.