This is the title of the web page

ಅರುಣಾಚಲ ಪ್ರದೇಶ ಶಾಲೆಗಳಲ್ಲಿ ಸಾಂಪ್ರದಾಯಿಕ ಉಡುಪು ತೊಡಲು ಅವಕಾಶ

ಇಟಾನಗರ, 11-: ಕರ್ನಾಟಕದ ಹಿಜಾಬ್ ವಿವಾದ ದೇಶಾದ್ಯಂತ ಹರಡಿರುವ ಬೆನ್ನಲ್ಲೇ ಅರುಣಾಚಲ ಪ್ರದೇಶದ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಪು ಧರಿಸಲು ಅವಕಾಶ ಒದಗಿಸಲಿವೆ.

2022-23ರ ಶೈಕ್ಷಣಿಕ ವರ್ಷದಿಂದ ಬುಡಕಟ್ಟು ಮತ್ತು ಇತರ ಸಮುದಾಯಗಳ ವಿದ್ಯಾರ್ಥಿಗಳು ಪ್ರತಿ ಸೋಮವಾರ ತಮ್ಮ ತಮ್ಮ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ಶಾಲೆಗೆ ಬರಲು ಶಿಕ್ಷಣ ಸಂಸ್ಥೆಗಳು ಅವಕಾಶ ನೀಡಲಿವೆ.

180ಕ್ಕೂ ಹೆಚ್ಚು ಶಾಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಅರುಣಾಚಲ ಪ್ರದೇಶ ಖಾಸಗಿ ಶಾಲೆಗಳು ಮತ್ತು ಮಕ್ಕಳ ಕಲ್ಯಾಣ ಸಂಘ ಈ ನಿರ್ಧಾರ ಕೈಗೊಂಡಿದೆ ಎಂದು ಸಂಘದ ಉಪಾಧ್ಯಕ್ಷ ತಾರಜೋನಿ ತಿಳಿಸಿದ್ದಾರೆ.

ಅರುಣಾಚಲದಲ್ಲಿ 100ಕ್ಕೂ ಹೆಚ್ಚು ಬುಡಕಟ್ಟುಗಳು ಮತ್ತು ಉಪ ಬುಡಕಟ್ಟುಗಳಿವೆ. ಆದಿವಾಸಿಗಳು ಸೇರಿದಂತೆ ವಿದ್ಯಾರ್ಥಿಗಳು ಪ್ರತಿ ಸೋಮವಾರ ಇಂಥ ಉಡುಪು ಧರಿಸಬೇಕು. ಇದು ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಧರಿಸುವ ಸ್ವಾತಂತ್ರ್ಯ ಹೊಂದಿರುತ್ತಾರೆ. ಅದೇ ರೀತಿ ಬುಡಕಟ್ಟು ಜನಾಂಗದವರಲ್ಲದವರು ತಮ್ಮ ಸಾಂಪ್ರದಾಯಿಕ ಉಡುಗೆ ತೊಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ ಎಂದು ಜೋನಿ ವಿವರಿಸಿದ್ದಾರೆ.

You might also like
Leave a comment