ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆ, ಆರೆಂಜ್ ಅಲರ್ಟ್​ ಘೋಷಣೆ

A B Dharwadkar
ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆ, ಆರೆಂಜ್ ಅಲರ್ಟ್​ ಘೋಷಣೆ

ಬೆಂಗಳೂರು :ಕರ್ನಾಟಕದಾದ್ಯಂತ ಅಕ್ಟೋಬರ್ 2 ರವರೆಗೂ ಮಳೆ ಮುಂದುವರಿಯಲಿದೆ. ಶನಿವಾರದಿಂದ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರಿಂದ ಐದು ದಿನ ವ್ಯಾಪಕವಾಗಿ ಮಳೆಯಾಗಲಿದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ (ಸೆಪ್ಟೆಂಬರ್ 27) ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ.
ಸೆಪ್ಟೆಂಬರ್ 27 ರಿಂದ ಕರ್ನಾಟಕದ ಉತ್ತರ ಭಾಗದಲ್ಲಿಯೇ ಜೋರಿದ್ದು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಸೆಪ್ಟೆಂಬರ್ 27ರಂದು ಉತ್ತರ ಒಳನಾಡಿನ ಬೀದರ, ಕಲಬುರಗಿ, ಯಾದಗಿರಿ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಸೆಪ್ಟೆಂಬರ್ 28ರಂದು ಬೀದರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಇದೇ ದಿನ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಸೆಪ್ಟೆಂಬರ್ 29ರಂದು ಬೆಳಗಾವಿ, ಬೀದರ, ಬಾಗಲಕೋಟೆ, ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.
ಸೆಪ್ಟೆಂಬರ್‌ 30ರಿಂದ 2ರ ವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ಅವಧಿಯಲ್ಲಿ ಗಾಳಿಯು ಪ್ರತಿ ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.